ದೇವನಹಳ್ಳಿ: ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರ ಜನ್ಮದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಕ್ರೀಡಾಂಗಣದಲ್ಲಿ (ಕೋರ್ಟ್ ಮುಂಭಾಗ) ಭಕ್ತಿಪೂರ್ವಕವಾಗಿ ಹಾಗೂ ಅದ್ಧೂರಿಯಾಗಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಪೂಜ್ಯ ಸ್ವಾಮೀಜಿಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಧಾರ್ಮಿಕ ಮೆರಗು ನೀಡಿದರು. ಪೂಜ್ಯ ಶ್ರೀ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿ, ಪೂಜ್ಯ ಶ್ರೀ ಶ್ರೀ ಮಾದರ ಚೆನ್ನಯ್ಯ ಸ್ವಾಮೀಜಿ ಸೇರಿದಂತೆ ಅನೇಕ ಸ್ವಾಮೀಜಿಗಳು ಉಪಸ್ಥಿತರಿದ್ದು ಸಚಿವರಾದ ಶ್ರೀ ಕೆ.ಹೆಚ್. ಮುನಿಯಪ್ಪ ಅವರಿಗೆ ಆಶೀರ್ವಾದ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ಹಿರಿಯರು, ವಿವಿಧ ಪಕ್ಷಗಳ ಮುಖಂಡರು, ಅಭಿಮಾನಿಗಳು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಚಿವರಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಹಲವು ಸಮಾಜಮುಖಿ ಕಾರ್ಯಗಳು ಕೂಡ ನಡೆಯಿತು.
ಈ ವೇಳೆ ಮಾತನಾಡಿದ ಸಚಿವರಾದ ಶ್ರೀ ಕೆ.ಹೆಚ್. ಮುನಿಯಪ್ಪ, ದೇವನಹಳ್ಳಿ ನನ್ನ ತಾಯಿಯ ತವರು. ದೇವನಹಳ್ಳಿ ಜನತೆ ನನಗೆ ತೋರುತ್ತಿರುವ ಅಪಾರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದಗಳಿಗೆ ನಾನು ಸದಾ ಚಿರಋಣಿ, ಎಂದು ಕೃತಜ್ಞತೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮಾದಾರ ಚನ್ನಯ್ಯ ಸ್ವಾಮೀಜಿ, ಹಾಗೂ ಹಲವಾರುಬಮಠಗಳ ಸ್ವಾಮೀಜಿಗಳು, ಸಚಿವರಾದ ಸತೀಶ್ ಜಾರಕಿಹೊಳಿ,ಈಶ್ವರ್ ಖಂಡ್ರೆ, ಮಾಜಿ ಸಚಿವ ಹೆಚ್.ಆಂಜನೇಯ,ಮಾಜಿ ಸಂಸದ ಚಂದ್ರಪ್ಪ ಶಾಸಕರಾದ ಶರತ್ ಬಚ್ಚೇಗೌಡ,ಬಸವಂತಪ್ಪ, ಹಲವಾರು ಗಣ್ಯರು, ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
Laxmi News 24×7