Breaking News

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯನ್ನು ಕೊಲೆಗೈದು ಪರಾರಿಯಾಗಿದ್ದ ಬಾಲಕ ಕೊನೆಗೂ ಅರೆಸ್ಟ್‌

Spread the love

ಬಳ್ಳಾರಿ: ಖಾಸಗಿ ಶಾಲಾ ಹಾಸ್ಟೆಲ್‌ನಲ್ಲಿ ಹಲ್ಲೆ ಮಾಡಿ ನಾಪತ್ತೆಯಾಗಿದ್ದ ಬಾಲಕನನ್ನು ಪೊಲೀಸರು  ಕೊನೆಗೂ ಪತ್ತೆ ಹಚ್ಚಿದ್ದಾರೆ.

ಮೊನ್ನೆ ರಾತ್ರಿ ಆರೋಪಿ ಹಾಸ್ಟೆಲ್‌ನಲ್ಲಿ ಮಲಗಿದ್ದ ಎಂಟು ವಿದ್ಯಾರ್ಥಿಗಳು ಹಾಗೂ ವಾರ್ಡನ್ ಮೇಲೆ ರಾಡ್‌ನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದ.

ಘಟನೆಯಲ್ಲಿ ಓರ್ವ ಬಾಲಕ ಮೃತಪಟ್ಟಿದ್ದರೆ, 8 ಜನರಿಗೆ ಗಾಯವಾಗಿತ್ತು. ಆರೋಪಿ ಬಾಲಕನ ಪತ್ತೆಗಾಗಿ 7 ಪ್ರತ್ಯೇಕ ತಂಡ ರಚನೆ ಮಾಡಲಾಗಿತ್ತು.

ತೀವ್ರ ಹುಡುಕಾಟ ನಡೆಸಿದ ಬಳ್ಳಾರಿ ಗ್ರಾಮೀಣ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ತನ್ನ ಊರಾದ ಗೋನಾಳ ಗ್ರಾಮದ ಹೊರ ವಲಯದ ಲೇಔಟ್ ಒಂದರಲ್ಲಿ ಅಡಗಿ ಕುಳಿತಿದ್ದ ಬಾಲಕನನ್ನು ವಶಕ್ಕೆ ಪಡೆದು ವೈದ್ಯರ ಮೂಲಕ ಕೌನ್ಸಿಲಿಂಗ್ ಮಾಡಿಸಲಾಗಿದೆ.

ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ.


Spread the love

About Laxminews 24x7

Check Also

ಫೈಲ್‌ಗಳನ್ನು ಹೊಸ ಅಧಿಕಾರಿಗಳಿಗೆ ಕೊಡ್ಬೇಡಿ – ವರ್ಗಾವಣೆಯಾದ್ರೂ ಅಧಿಕಾರಿಗಳಿಗೆ ವರ್ತಿಕಾ ಕರೆ

Spread the loveಬಳ್ಳಾರಿ: ಬ್ಯಾನರ್‌ ಗಲಭೆ ಬಳಿಕ ವರ್ಗಾವಣೆ ಆಗಿದ್ದ ಡಿಐಜಿ ಆಗಿದ್ದ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್  ಹಂತದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ