Breaking News

ಮಹೇಶ್ವರಿ ಅಂಧ ಮಕ್ಕಳ ಶಾಲೆ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

Spread the love

ಬೆಳಗಾವಿ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 2026 ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ವತಿಯಿಂದ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಳಗಾವಿ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಇತರೆ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ಮಹೇಶ್ವರಿ ಅಂಧ ಮಕ್ಕಳ ಶಾಲೆ ಸಭಾಂಗಣ, ಬೆಳಗಾವಿ ಇಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಸಂದೀಪ್ ಪಾಟೀಲ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಳಗಾವಿ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚೇತನಕುಮಾರ್, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಅನ್ನಪ್ಪ ಹೆಗಡೆ, ಜಿಲ್ಲಾ ಯೋಜನಾ ಅಧಿಕಾರಿ: ಕಂಚನ ಅಮಟೆ, ಜಿಲ್ಲಾ ಮಹಿಳಾ ಕಲ್ಯಾಣಾಧಿಕಾರಿ; ರಾಮಮೂರ್ತಿ, ಸಿಡಿಪಿಒ ಬೆಳಗಾವಿ ನಗರ; ಹಾಗೂ  ಸುಮಿತ್ರಾ, ಸಿಡಿಪಿಒ ಬೆಳಗಾವಿ ಗ್ರಾಮೀಣ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸುರೇಖಾ ಪಾಟೀಲ ಹಾಗೂ ಮಲ್ಲೇಶ್ ಕುಂದರಗಿ ಅವರು ಮಹಿಳಾ ಸಬಲೀಕರಣ, ಮಹಿಳೆಯರು ಮತ್ತು ಮಕ್ಕಳ ರಕ್ಷಣೆಯ ಕುರಿತು ಹಾಗೂ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಕುರಿತು ಮಾಹಿತಿ ನೀಡಿದರು.


Spread the love

About Laxminews 24x7

Check Also

ಗ್ಯಾರಂಟಿಗಳ ಬಜೆಟ್ ಇಡೀ ರಾಜ್ಯದ ಆರ್ಥಿಕತೆ ಕುಸಿತಕ್ಕೆ ಕಾರಣವಾಗಲಿದೆ

Spread the loveಬೆಳಗಾವಿ: ಶಿಸ್ತುಬದ್ಧ ತೆರಿಗೆ ಪಾವತಿ ಸೇರಿ ದೇಶದ ಕಾನೂನು ಪಾಲನೆಯಲ್ಲಿ ಯೋಜನಾ ಬದ್ಧ ಜೀವನ ವ್ಯವಸ್ಥೆ ಹೊಂದಿರುವ ಕರ್ನಾಟಕಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ