Breaking News

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ, ಹುಬ್ಬಳ್ಳಿಯಲ್ಲಿ ಡಿ.ಕೆ.ಶಿವಕುಮಾರ್ ಬೆಂಬಲಿಗರ ಸಂಭ್ರಮ

Spread the love

ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಬೆಂಬಲಿಗರು ಹುಬ್ಬಳ್ಳಿಯಲ್ಲಿ ಸಂಭ್ರಮಾಚರಣೆ ನಡೆಸಿದರು.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಸರ್ವೋದಯ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹಾಗೂ ಪರಸ್ಪರ ಸಿಹಿ ತಿನ್ನಿಸುವ ಮೂಲಕ ವಿಜಯೋತ್ಸವ ಆಚರಿಸಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರ ಅಳಿಯ ರಜತ್ ಉಳ್ಳಾಗಡ್ಡಿಮಠ ಅವರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು. ಈ ವೇಳೆ ಕಾರ್ಯಕರ್ತರು “ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್” ಎಂದು ಘೋಷಣೆ ಕೂಗಿ ತಮ್ಮ ಬೆಂಬಲ ವ್ಯಕ್ತಪಡಿಸಿದರು.

ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.


Spread the love

About Laxminews 24x7

Check Also

ನನ್ನ ರಾಜಕೀಯ ಜೀವನ ಬೆಳವಣಿಗೆಗೆ ಅನೇಕ ಹಿರಿಯರ ಆಶೀರ್ವಾದವಿದೆ: ಸಚಿವ ಕೆ.ಎಚ್.ಮುನಿಯಪ್ಪ

Spread the loveದೇವನಹಳ್ಳಿ: ನಾನು ನನ್ನ ರಾಜಕೀಯ ಜೀವನದಲ್ಲಿ ಕೇಂದ್ರ ಮತ್ತು ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ