Breaking News

ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಸಾವು

Spread the love

ಶಿವಮೊಗ್ಗ : ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕರೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಇಂದು ನಡೆದಿದೆ.

ಮೃತಪಟ್ಟ ಶಿಕ್ಷಕ ಭದ್ರಾವತಿಯ ಸತ್ಯಸಾಯಿ ಶಿಕ್ಷಣ ಸಂಸ್ಥೆಯ ಕುಮಾರ್ (48) ಎಂದು ಗುರುತಿಸಲಾಗಿದೆ. ಮೃತ ಶಿಕ್ಷಕ ಕುಮಾರ್ ಶಿವಮೊಗ್ಗದ ಎನ್.ಇ.ಎಸ್ ಪ್ರೌಢಶಾಲೆಯಲ್ಲಿ ನಡೆಯುತ್ತಿದ್ದ ಸಮಾಜ ವಿಜ್ಞಾನ ವಿಷಯದ ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು. ಇಂದು ಮಧ್ಯಾಹ್ನದವರೆಗೂ ಮೌಲ್ಯಮಾಪನ ಕಾರ್ಯದಲ್ಲಿ ತೊಡಗಿದ್ದ ಮೃತ ಶಿಕ್ಷಕ ಕುಮಾರ್ ಮಧ್ಯಾಹ್ನ ಊಟಕ್ಕೆ ತೆರಳಲು ಹೊರಡುತ್ತಿದ್ದರು. ಈ ವೇಳೆ ಶಾಲಾ ಆವರದಲ್ಲಿಯೇ ಕುಸಿದು ಬಿದ್ದ ಶಿಕ್ಷಕನನ್ನು ಸಿಬ್ಬಂದಿ ಆಸ್ಪತ್ರೆಗೆ ಸಾಗಿಸಲು ಯತ್ನಿಸಿದರು. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿಯೇ ಶಿಕ್ಷಕ ಕುಮಾರ್ ಮೃತಪಟ್ಟಿದ್ದಾರೆ.

ಮೃತ ಶಿಕ್ಷಕ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೃತ ಶಿಕ್ಷಕನ ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಸ್ಥಳಕ್ಕೆ ಡಿಡಿಪಿಐ ರಮೇಶ್ ಭೇಟಿ ನೀಡಿ ಮೃತ ಶಿಕ್ಷಕನ ಕುಟುಂಬಕ್ಕೆ ಸಾಂತ್ವಾನ ಹೇಳಿದರು.


Spread the love

About Laxminews 24x7

Check Also

ಶಿರಸಿ: ಡೀಲ್ ನಿಮ್ದು, ಕಮಿಷನ್ ನಮ್ದು- ಆಹಾರದ ಕಿಟ್ ಸ್ಕ್ಯಾಮ್‌ ಆರೋಪದ ಪೋಸ್ಟರ್‌ ವೈರಲ್‌

Spread the love ಶಿರಸಿ: ಮಂಗಳವಾರ ಫೆ.28 ರಂದು ತಾಲೂಕಿನ ಬನವಾಸಿಗೆ ಕದಂಬೋತ್ಸವ ಉದ್ಘಾಟನೆಗೆ ಆಗಮಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ