Breaking News

ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿನಿ ಸೂಸೈಡ್

Spread the love

ಬೀದರ್: ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಬೇಸತ್ತು ಶಾಲೆಯ ಮಹಡಿ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೀದರ್  ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ.

ಮದಿಯಾ ನಶೀರ್ ಪಾಷಾ (16) ಆತ್ಮಹತ್ಯೆಗೆ ಶರಣಾದ ಬಾಲಕಿ. ಭೆಮಳಖೇಡ ಗ್ರಾಮದ ಶಾಲೆಯೊಂದರಲ್ಲಿ ಹತ್ತನೇ ತರಗತಿ ಓದುತ್ತಿದ್ದರುವುದಾಗಿ ತಿಳಿದುಬಂದಿದೆ.

ಸಹಪಾಠಿಯಿಂದ ಲವ್ ಮಾಡುವಂತೆ ಚುಡಾಯಿಸಿದಕ್ಕೆ ಹಾಗೂ ಪ್ರೀತಿಸುವಂತೆ ಒತ್ತಡ ಹಾಕಿದ್ದಕ್ಕೆ ಶಾಲಾ ಕಟ್ಟಡದ ಮೇಲಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಲಕಿಗೆ ಸಹಪಾಠಿ ಚುಡಾಯಿಸಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈವರೆಗೂ ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಭೆಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಜಮೀರ್ ದರ್ಗಾವಾಲೆ ಕೊಲೆ ಪ್ರಕರಣ: ಪ್ರಮುಖ ಆರೋಪಿ ಸೇರಿ ಐವರು ಬಂಧನ; ಮೀಟರ್ ಬಡ್ಡಿ ದಂಧೆಯೇ ಹತ್ಯೆಗೆ ಕಾರಣ?

Spread the loveಮುಂಡಗೋಡ ಪಟ್ಟಣದಲ್ಲಿ ನಡೆದ ಜಮೀರ್ ಅಹ್ಮದ್ ದರ್ಗಾವಾಲೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹತ್ವದ ಯಶಸ್ಸು ಸಾಧಿಸಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ