ಗೋಕಾಕ: ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ದೆಹಲಿಗೆ ತೆರಳಿದ್ದು, ರಾಜ್ಯದ ನೀರಾವರಿ ಯೋಜನೆಗಳ ಕುರಿತು ಕೇಂದ್ರದ ಜಲಶಕ್ತಿ ಸಚಿವರು, ಕಾನೂನು ತಜ್ಞರು ಹಾಗೂ ತಾಂತ್ರಿಕ ಸಲಹೆಗಾರರನ್ನು ಭೇಟಿಯಾಗಿ ಸಭೆ ನಡೆಸಲಿದ್ದಾರೆ.
ದಿ. ೧೪ ರಂದು ಸಂಜೆ೪.೪೫ ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ್ದು, ದಿ.೧೫ರಂದು ಕೃಷ್ಣ ಜಲ ನ್ಯಾಯಾಧಿಕರಣ ಹಾಗೂ ಮೇಕೆದಾಟು ಸಮತೋಲನ ಜಲಾಶಯದ ಬಗ್ಗೆ ಕೇಂದ್ರದ ಜಲಶಕ್ತಿ ಸಚಿವರು, ಕಾನೂನು ತಜ್ಞರು ಹಾಗೂ ತಾಂತ್ರಿಕ ಸಲಹೆಗಾರರೊಂದಿಗೆ ಸಭೆಯಲ್ಲಿ ಭಾಗವಹಿಸಿ, ನದೆಹಲಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ದಿ.೧೬ರಂದು ಕಾನೂನು ತಜ್ಞರು ಹಾಗೂ ತಾಂತ್ರಿಕ ಸಲಹೆಗಾರರೊಂದಿಗೆ ಸಭೆಯಲ್ಲಿ ಭಾಗವಹಿಸಿ, ನದೆಹಲಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.
Laxmi News 24×7