Breaking News

ಮಕ್ಕಳ ಮೇಲಿನ ದೌರ್ಜನ್ಯ ತೊಲಗಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು

Spread the love

ಐನಾಪುರ: ಮಕ್ಕಳ ಮೇಲಿನ ದೌರ್ಜನ್ಯ, ಬಾಲಕಾರ್ಮಿಕ ಪದ್ಧತಿ ಮತ್ತು ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗು ತೊಲಗಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ವಕೀಲ ರಾಹುಲ ಕಟಗೇರಿ ಹೇಳಿದರು.
ಪಟ್ಟಣದ ಶಾಂತಿಸಾಗರ ಆಂಗ್ಲ ಮಾಧ್ಯಮ ಶಾಲೆ ಸಭಾಭವನದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಕಾನೂನು ಸೇವಾಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳನ್ನು ರಕ್ಷಿಸಲು ಪೋಕ್ಸೋ ಕಾಯ್ದೆ ಬೆಂಬಲವಿದ್ದು, ಮಕ್ಕಳು ಮೊಬೈಲ್ ಬಳಕೆ ಕಡಿಮೆ ಮಾಡಿ ಜೀವನದಲ್ಲಿ ಜಾಗೃತಿ, ಶಿಸ್ತು ಮೈಗೂಡಿಸಿಕೊಳ್ಳಬೇಕು ಎಂದರು.
ತಾಲೂಕು ವಕೀಲರ ಸಂಘದ ಮಾಜಿ ಅಧ್ಯಕ್ಷ ಪ್ರಕಾಶ ಮಾನೆ, ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಮಹಾದೇವಿ ಶಿರಗುಪ್ಪಿ ಮಾತನಾಡಿದರು. ಅರುಣ ಗಾಣಿಗೇರ, ಪಾಯಪ್ಪ ಕುಡವಕ್ಕಲಗಿ, ಆರ್.ಬಿ.ಬಸನ್ನವರ ಇತರರಿದ್ದರು.

Spread the love

About Laxminews 24x7

Check Also

ತಾಳ್ಮೆಯಿಂದ ಪರೀಕ್ಷೆ ಎದುರಿಸಬೇಕು

Spread the loveಅಥಣಿ: ಸತತ ಪರಿಶ್ರಮದೊಂದಿಗೆ ತಾಳ್ಮೆಯಿಂದ ಪರೀಕ್ಷೆ ಎದುರಿಸಬೇಕು ಎಂದು ಸ್ಥಳೀಯ ಕೆಎಲ್‌ಇ ಸಂಸ್ಥೆಯ ಸಿ.ಎಸ್.ಕಿತ್ತೂರ ಪ್ರೌಢಶಾಲೆ ಮುಖ್ಯಶಿಕ್ಷಕ ಎಸ್.ಜಿ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ