Breaking News

ನಿಯಮ ಉಲ್ಲಂಘಿಸಿದರೆ ದಂಡ, ಶಿಕ್ಷೆ: ತಂಬಾಕು‌ ಮಾರಾಟಗಾರರಿಗೆ ಎಚ್ಚರಿಕೆ

Spread the love

ಬೆಳಗಾವಿ: ತಂಬಾಕು ಹಾಗೂ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಮತ್ತು ಕೋಟ್ಟಾ-2003 ರ ಕಾಯ್ದೆ ಕುರಿತ ತರಬೇತಿ ಕಾರ್ಯಾಗಾರವನ್ನು ರಾಮದುರ್ಗ ತಾಲ್ಲೂಕಾ ಆರೋಗ್ಯಾಧಿಕಾರಿಗಳ ಕಚೇರಿ ಮತ್ತು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಗುರುವಾರ(ಮಾ.12) ರಾಮದುರ್ಗದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಿಪಿಐ ವಿನಾಯಕ ಬಡಿಗೇರ ಅವರು, ತಂಬಾಕು ಮಾರಾಟ ಮಾಡುತ್ತಿರುವ ಅಂಗಡಿ ಮಾಲೀಕರಿಗೆ ಕೋಟ್ಟಾ ಕಾಯ್ದೆ ಕುರಿತು ತಿಳಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಡಾ. ಶ್ವೇತಾ ಪಾಟೀಲ್, ತಂಬಾಕು ಸೇವನೆಯಿಂದ ಅನೇಕ ಕ್ಯಾನ್ಸರ್ ಕಾರಕ ರೋಗಗಳು ಗ್ಯಾಂಗ್ರೀನ್, ಗರ್ಭಕಂಠದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಮಕ್ಕಳ ಬೆಳವಣಿಗೆಯಲ್ಲಿ ಕುಂಠಿತ ಹೀಗೆ ಹತ್ತು ಹಲವಾರು ಕಾಯಿಲೆಗಳು ತಂಬಾಕು ಸೇವನೆಯಿಂದ ದುಷ್ಪರಿಣಾಮ ಬೀರುತ್ತವೆ ಎಂದು ವಿವರಿಸಿದರು.

ಕೋಟ್ಟಾ ಕಾಯ್ದೆ ಅಡಿಯಲ್ಲಿ ಸೆಕ್ಷನ್ -4 ರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇದ ಹಾಗೂ 1000 ರೂ ದಂಡ ವಿಧಿಸಿಲಾಗುತ್ತಿದೆ. ಸೆಕ್ಷನ್-6 (ಏ) ಪ್ರಕಾರ 21 ವರ್ಷದ ಒಳಗಿನ ಯುವಕರಿಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದು ನಿಷೇಧಿಸಲಾಗಿದೆ. ಸೆಕ್ಷನ್-6 (ಬಿ) ಪ್ರಕಾರ ಶೈಕ್ಷಣಿಕ ಸಂಸ್ಥೆಯ 100 ಗಜದ ಅಂತರದೋಳಗೆ ತಂಬಾಕು ಉತ್ಪನ್ನಗಳನ್ನ ಮಾರಾಟ ಮಾಡುವುದು ಶಿಕ್ಷರ್ಹಾದ ಅಪರಾಧ ಮತ್ತು ಸೆಕ್ಷನ್-6 (ಸಿ) ಪ್ರಕಾರ ಬಿಡಿ ಬಿಡಿಯಾಗಿ ಸಿಗರೇಟ್ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ಡಾ‌.ಶ್ವೇತಾ ಪಾಟೀಲ ತಿಳಿಸಿದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ