Breaking News

ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ತಾಯಿ – ಮಲತಂದೆ‌ ಸೇರಿ ಮೂವರು ಅರೆಸ್ಟ್

Spread the love

ಬೆಂಗಳೂರು: ಹಣದಾಸೆಗೆ ಬಿದ್ದು‌ 15 ವರ್ಷದ ಮಗಳನ್ನು ತಾಯಿ ಹಾಗೂ ಮಲತಂದೆ ಸೇರಿ ವೇಶ್ಯಾವಾಟಿಕೆಗೆ ದೂಡಿದ ಪ್ರಕರಣ ಚಂದ್ರಾ ಲೇಔಟ್ ಪೊಲೀಸ್‌  ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಚಂದ್ರಾಲೇಔಟ್ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಈ ಕರಾಳ ಕೃತ್ಯ ಬಯಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಮಗಳನ್ನ ವೇಶ್ಯಾವಾಟಿಕೆಗೆ ದೂಡಿದ್ದ ತಾಯಿ, ಆಕೆಯ ಮಲತಂದೆ ಹಾಗೂ ಮತ್ತೋರ್ವ ಮಹಿಳೆ ವಾಣಿ ಎಂಬಾಕೆಯನ್ನ ಬಂಧಿಸಿದ್ದಾರೆ.

ಬಂಧಿತ ತಾಯಿ ಮತ್ತು ಮಲತಂದೆ ಪ್ರತಿದಿನ ಕಾರಿನಲ್ಲಿ ಬಾಲಕಿಯನ್ನು ಆರೋಪಿ ವಾಣಿ ಮನೆಗೆ ಕರೆದುಕೊಂಡು ಹೋಗಿ ಬಿಡುತ್ತಿದ್ದರು. ಅಲ್ಲಿ ಬಾಲಕಿ ಸಂಜೆವರೆಗೂ ಗ್ರಾಹಕರ ಕಿರುಕುಳಕ್ಕೆ ಬಲಿಯಾಗುತ್ತಿದ್ದಳು. ಗ್ರಾಹಕರಿಗೆ ವಾಣಿ 6 ರಿಂದ 10 ಸಾವಿರ ರೂಪಾಯಿ ಹಣ ನಿಗದಿಪಡಿಸುತ್ತಿದ್ದಳು. ಇದರಲ್ಲಿ ಅರ್ಧದಷ್ಟು ಹಣವನ್ನು ತಾಯಿಗೆ ನೀಡಲಾಗುತ್ತಿತ್ತು ಎಂಬ ಆಘಾತಕಾರಿ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ.

ಪೊಲೀಸರು ಬಾಲಕಿಯನ್ನು ರಕ್ಷಿಸಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ (POCSO Case) ದಾಖಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.


Spread the love

About Laxminews 24x7

Check Also

ಯುದ್ಧದ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್.ಅಶೋಕ್

Spread the loveಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಅಭಾವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ  ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ