Breaking News

ಹುಕ್ಕೇರಿ ತಾಲೂಕಿನ ಕನ್ನಡ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ವಿತರಣೆ

Spread the love

ಹುಕ್ಕೇರಿ: ಪಟ್ಟಣದ ವಿಶ್ವರಾಜ ಭವನದಲ್ಲಿ ಆನ್‌ಲೈನ್ ಇನ್‌ಸ್ಟ್ರುಮೆಂಟ್ಸ್ ಇಂಡಿಯಾ ಪ್ರೈ. ಲಿಮಿಟೆಡ್ ಬೆಂಗಳೂರು ಮತ್ತು ಕಬ್ಬೂರಿನ ಬಿ.ಜಿ.ಬೆಲ್ಲದ ಶಿಕ್ಷಣ ಮತ್ತು ಸಮಾಜ ಸೇವಾ ಸಂಸ್ಥೆ ಆಶ್ರಯದಲ್ಲಿ ಹುಕ್ಕೇರಿ ತಾಲೂಕಿನ ಕನ್ನಡ ಸರ್ಕಾರಿ ಶಾಲೆಗಳಿಗೆ ತಂತ್ರಜ್ಞಾನ ಆಧಾರಿತ 50 ಉಚಿತ ಸ್ಮಾರ್ಟ್ ಬೋರ್ಡ್ ಹಾಗೂ ಕೊಠಡಿಗಳ ನವೀಕರಣ, ಕುಡಿಯುವ ನೀರಿನ ಶುದ್ಧೀಕರಣ ಘಟಕ, ಪೀಠೋಪಕರಣ, ಆಟೋಪಕರಣ ವಿತರಣೆ ಸಮಾರಂಭ ಮಾ.13ರಂದು ಬೆಳಗ್ಗೆ 10.30ಕ್ಕೆ ಹುಕ್ಕೇರಿಯ ವಿಶ್ವರಾಜ ಭವನದಲ್ಲಿ ಜರುಗಲಿದೆ.
ನಿಡಸೋಸಿ ದುರುದುಂಡೀಶ್ವರ ಸಿದ್ಧ ಸಂಸ್ಥಾನ ಮಠದ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಆನ್‌ಲೈನ್ ಇನ್‌ಸ್ಟ್ರುಮೆಂಟ್ಸ್ ಇಂಡಿಯಾ ಲಿಮಿಟೆಡ್‌ನ ಶಿವಾನಂದ ಮಹಾಶೆಟ್ಟಿ ಅಧ್ಯಕ್ಷತೆ ವಹಿಸುವರು.
ಉದ್ಘಾಟಕರಾಗಿ ಮಾಜಿ ಸಂಸದ ರಮೇಶ ಕತ್ತಿ, ಅತಿಥಿಗಳಾಗಿ ಶಾಸಕ ನಿಖಿಲ ಕತ್ತಿ, ಉದ್ಯಮಿ ಮಹೇಶ ಬೆಲ್ಲದ,  ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ  ಆರ್.ಎಸ್.ಸೀತಾರಾಮು, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಭಾವತಿ ಪಾಟೀಲ ಸೇರಿ ಇತರರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

Spread the love

About Laxminews 24x7

Check Also

ಸಂಕೇಶ್ವರ: ಹಿಂದೂ ಸಂಘಟನೆ ಕಾರ್ಯಕರ್ತರಿಂದಲೇ ಆರ್‌ಎಸ್‌ಎಸ್ ಕಾರ್ಯಕರ್ತನ ಮೇಲೆ ಕೊಲೆ ಯತ್ನ!

Spread the love24 ಗಂಟೆಗಳಲ್ಲಿ 7 ಆರೋಪಿಗಳನ್ನು ಬಂಧಿಸಿದ ಸಂಕೇಶ್ವರ ಪೊಲೀಸರು ಹುಕ್ಕೇರಿ: ಸಂಕೇಶ್ವರ ಪಟ್ಟಣದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ