Breaking News

ಬೆಳಗಾವಿಯಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ

Spread the love

ಬೆಳಗಾವಿ:  ನಗರದ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಬಸವನ ಕುಡಚಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಜಾತ್ರೆಯ ಪ್ರಯುಕ್ತ ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬಸವಣ ಕುಡಚಿ ಗ್ರಾಮದ ಹದ್ದಿಯಲ್ಲಿ ಬರುವ ಶಿಂದೊಳ್ಳಿ ಕ್ರಾಸ್ ಮತ್ತು ಬಸವನ ಕುಡಚಿ ಗ್ರಾಮದ ಹತ್ತಿರ ಇರುವ ಸರಾಯಿ ಅಂಗಡಿಯನ್ನು ಮಾ. 16 ಹಾಗೂ 17 ರಂದು ಮದ್ಯ ಮಾರಾಟದ ಅಂಗಡಿಗಳು, ಬಾರ್/ರೆಸ್ಟೋರೆಂಟ್‌ಗಳು, ಕ್ಲಬ್‌ಗಳು ಬಂದ್ ಇಡುವಂತೆ ಬೆಳಗಾವಿ ನಗರ ಪೊಲೀಸ್ ಆಯುಕ್ತರು ಬೊರಸೆ ಭೂಷಣ್ ಗುಲಾಬರಾವ್ ಅವರು ಆದೇಶ ಹೊರಡಿಸಿರುತ್ತಾರೆ.

ಸದರಿ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಬೊರಸೆ ಭೂಷಣ್ ಗುಲಾಬರಾವ್ ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಆದೇಶದಲ್ಲಿ ತಿಳಿಸಿರುತ್ತಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ