Breaking News

ಅಗ್ನಿ ಅವಘಡ – 320 ಕ್ವಿಂಟಲ್ ಮೆಕ್ಕೆ ಜೋಳ ಭಸ್ಮ

Spread the love

ದಾವಣಗೆರೆ: ಆಕಸ್ಮಿಕವಾಗಿ ಬೆಂಕಿ ಬಿದ್ದು ಸುಮಾರು 4.75 ಲಕ್ಷ ರೂ. ಮೌಲ್ಯದ 320 ಕ್ವಿಂಟಲ್ ಮೆಕ್ಕೆ ಜೋಳ  ಸುಟ್ಟು ಭಸ್ಮವಾಗಿರುವ ಘಟನೆ ದಾವಣಗೆರೆಯ ನ್ಯಾಮತಿ  ತಾಲೂಕಿನ ಯರಗನಾಳ್ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ವೀರಬಸಪ್ಪ ಅವರಿಗೆ ಸೇರಿದ ಎರಡು ಎಕರೆಯಲ್ಲಿ ಬೆಳೆದ 70 ಕ್ವಿಂಟಲ್ ಮೆಕ್ಕೆ ಜೋಳಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. 1 ಲಕ್ಷದ 25 ಸಾವಿರ ರೂ. ನಷ್ಟವಾಗಿದೆ. ಅದೇ ರೀತಿ ಗ್ರಾಮದ ಬಸಪ್ಪ ಅವರು ಎಂಟು ಎರೆಕ ಜಮೀನಿನಲ್ಲಿ 250 ಕ್ಚಿಂಟಾಲ್ ಮೆಕ್ಕೆ ಜೋಳ ಬೆಳೆದಿದ್ದು ಅದು ಕೂಡ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗಿದ್ದು ಸುಮಾರು ಮೂರುವರೆ ಲಕ್ಷ ರೂ. ನಷ್ಟವಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮದ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ನಷ್ಟಕ್ಕೊಳಗಾದ ರೈತರು ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Spread the loveದಾವಣಗೆರೆ/ಬೆಂಗಳೂರು: ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸದಿದ್ದಕ್ಕಾಗಿ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಮೂವರ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ