Breaking News

ಉಪಚುನಾವಣೆ ಹೊತ್ತಲ್ಲೇ ಬಾಗಲಕೋಟೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ

Spread the love

ಬಾಗಲಕೋಟೆ: ಉಪಚುನಾವಣೆ  ಹೊತ್ತಲ್ಲೇ ಬಾಗಲಕೋಟೆ  ಬಿಜೆಪಿಯಲ್ಲಿ  ಅಸಮಾಧಾನದ ಹೊಗೆ ಕಾಣಿಸಿಕೊಂಡಿದೆ. ಪಕ್ಷದ ಸಹ ವಕ್ತಾರ ಸ್ಥಾನಕ್ಕೆ ಪ್ರಸನ್ನ ಔರಸಂಗ ರಾಜೀನಾಮೆ ನೀಡುತ್ತಿದ್ದೇನೆ ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದು, ಭಾರೀ ಕೋಲಾಹಲಕ್ಕೆ ಕಾರಣವಾಗಿದೆ.

ನಾನು ನನ್ನ ಬಿಜೆಪಿ ಸಹ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ, ದನ್ಯವಾದಗಳು ಎಂದು ಪ್ರಸನ್ನ ಔರಸಂಗ ಪೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ. ಪೋಸ್ಟ್‌ನಲ್ಲಿ ಬಿಜೆಪಿ ಸಹ ವಕ್ತಾರನಾಗಿ ಆಯ್ಕೆ ಆದಾಗಿನ ಪತ್ರ ಹಾಕಿ ರಾಜೀನಾಮೆ ನೀಡುತ್ತಿರುವುದಾಗಿ ಬರೆದುಕೊಂಡಿದ್ದಾರೆ. ಇದು ಬಾಗಲಕೋಟೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಪೋಸ್ಟ್‌ನಲ್ಲಿ ಪಕ್ಷದಲ್ಲಿ ಕೆಲ ಹೊಗಳು ಭಟ್ಟರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಬೇರೆಯವರನ್ನು ಕಾಲ ಕಸದ ಹಾಗೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.


Spread the love

About Laxminews 24x7

Check Also

ಬಸವೇಶ್ವರ ಪ.ಪೂ ವಾಣಿಜ್ಯ ಮಹಾವಿದ್ಯಾಲಯದ ಫಲಿತಾಂಶ : ಶೇ.88.10%

Spread the loveಬಾಗಲಕೋಟೆ: 2025-26ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿಯ ಫಲಿತಾಂಶ ಪ್ರಕಟವಾಗಿದ್ದು, ಮಹಾವಿದ್ಯಾಲಯದ ಕುಮಾರ ಮಂಥನ ಮಹಾವೀರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ