Breaking News

ಸರಸ್ವತಿ, ಜಾವೇದ್​ ಯೂನಿವರ್ಸಿಟಿ ಬ್ಲೂ

Spread the love

ಸವದತ್ತಿ: ನಗರದ ಕೆಎಲ್​ಇ ಸಂಸ್ಥೆಯ ಎಸ್​ವಿಎಸ್​ ಬೆಳ್ಳುಬ್ಬಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪರವಾಗಿ ಏರ್ಪಡಿಸಿದ್ದ ಹ್ಯಾಂಡ್​ಬಾಲ್​ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಯೂನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದಾರೆ. ಬಿಎ ತೃತೀಯ ವರ್ಷದ ವಿದ್ಯಾರ್ಥಿನಿ ಸರಸ್ವತಿ ಮಾದರ ಮಹಿಳಾ ಹ್ಯಾಂಡ್​ಬಾಲ್​ ತಂಡಕ್ಕೆ ಆಯ್ಕೆಯಾಗಿದ್ದು, ಮಾ.22ರಿಂದ 26ರವರೆಗೆ ಕೇರಳದ ಮಹಾತ್ಮಗಾಂಧಿ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ದಣ ಭಾರತ ಅಂತರ ವಿಶ್ವವಿದ್ಯಾಲಯಗಳ ಮಹಿಳಾ ಹ್ಯಾಂಡ್​ಬಾಲ್​ ಪಂದ್ಯಾವಳಿಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ತಂಡದಿವನ್ನು ಪ್ರತಿನಿಧಿಸಲಿದ್ದಾರೆ. ಬಿಕಾಂ ತೃತೀಯ ವರ್ಷದ ವಿದ್ಯಾರ್ಥಿ ಜಾವೇದ್​ ನದ್​ಾ ಪುರುಷರ ಹ್ಯಾಂಡ್​ಬಾಲ್​ ತಂಡಕ್ಕೆ ಆಯ್ಕೆಯಾಗಿದ್ದು, ಮಾ. 17ರಿಂದ 21ರವರೆಗೆ ತಮಿಳುನಾಡಿನ ವೆಲ್ಲೂರಿನ ವಿಐಟಿ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ದಣ ಭಾರತ ಅಂತರ ವಿಶ್ವವಿದ್ಯಾಲಯಗಳ ಪುರುಷರ ಹ್ಯಾಂಡ್​ಬಾಲ್​ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.


Spread the love

About Laxminews 24x7

Check Also

ಹರ್ಷ ಸಕ್ಕರೆ ಕಾರ್ಖಾನೆಯ ಸಿಬ್ಬಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Spread the loveಸವದತ್ತಿ: ಹರ್ಷ ಸಕ್ಕರೆ ಕಾರ್ಖಾನೆಯಲ್ಲಿ ಹರ್ಷ ಶುಗರ್ಸ್, ಮೃಣಾಲ್ ಶುಗರ್ಸ್ ಹಾಗೂ ಲಕ್ಷ್ಮೀತಾಯಿ ಸೌಹಾರ್ದ ಸಹಕಾರಿ ಸಂಘದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ