Breaking News

ಇಷ್ಟು ವರ್ಷ ಶಾಮನೂರರನ್ನು ಗೆಲ್ಲಿಸಿದ್ವಿ, ಈಗ ನಮಗೆ ಟಿಕೆಟ್ ಕೊಡಿ – ಮುಸ್ಲಿಂ ಮುಖಂಡರ ಒತ್ತಾಯ

Spread the love

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರನ್ನು ಇಷ್ಟು ವರ್ಷ ಗೆಲ್ಲಿಸಿಕೊಂಡು ಬಂದಿದ್ದೇವೆ. ಈ ಉಪಚುನಾವಣೆಯಲ್ಲಿ  ದಾವಣಗೆರೆ ದಕ್ಷಿಣ  ಕ್ಷೇತ್ರಕ್ಕೆ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ನಿಂದ ಟಿಕೆಟ್ ನೀಡಬೇಕು ಎಂದು ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.

ಇದರ ನಡುವೆ ಕೆಲವು ಮುಸ್ಲಿಂ ಮುಖಂಡರು ಸಮರ್ಥ್ ಶಾಮನೂರು ಅವರಿಗೆ ಟಿಕೇಟ್ ನೀಡುವಂತೆ ಸಿಎಂ ಹಾಗೂ ಡಿಸಿಎಂಗೆ ಒತ್ತಾಯಿಸಿದ್ದಾರೆ. ಸಮರ್ಥ್ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದ ಮುಸ್ಲಿಂ ಮುಖಂಡರ ವಿರುದ್ಧ ಅದೇ ಸಮುದಾಯದ ಯುವಕರು ಆಕ್ರೋಶ ಹೊರಹಾಕಿದ್ದಾರೆ.

ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಜೊತೆ ನಿಯೋಗ ಹೋಗಿ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್‍ಗಾಗಿ ಒತ್ತಾಯ ಮಾಡಿದ್ದಾರೆ ಎಂದು ಯುವಕರು ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ ಅಂಜುಮನ್ ಇಸ್ಲಾಂ ಕಮಿಟಿ ಅಧ್ಯಕ್ಷರನ್ನು ಪ್ರಶ್ನೆ ಮಾಡಿ ಘೇರಾವ್ ಹಾಕಲು ಯುವಕರ ಗುಂಪು ಮುಂದಾಗಿತ್ತು.

ಕಚೇರಿಯಲ್ಲಿ ಅಧ್ಯಕ್ಷ ದಾದು ಸೇಠ್ ಸಿಗದ ಕಾರಣ ಕೆರಳಿದ್ದ ಯುವಕರ ಗುಂಪು, ಅಂಜುಮನ್ ಕಮಿಟಿಯ ಕಚೇರಿ ಎದುರು ನಿಂತು ಧಿಕ್ಕಾರ ಕೂಗಿದರು. ಬಳಿಕ ಮುಸ್ಲಿಂ ಮುಖಂಡರು ತಿಳಿ ಹೇಳಿ ಅವರನ್ನು ಅಲ್ಲಿಂದ ಕಳಿಸಿದ್ದಾರೆ.


Spread the love

About Laxminews 24x7

Check Also

ದಾವಣಗೆರೆ | ಯಾರಿಗೆ ಟಿಕೆಟ್‌ ಕೊಟ್ಟರೂ ಬಿಜೆಪಿ ಗೆಲ್ಲಿಸ್ತೇವೆ – ಐವರು ಟಿಕೆಟ್ ಆಕಾಂಕ್ಷಿಗಳಿಂದ ಒಗ್ಗಟ್ಟು ಪ್ರದರ್ಶನ

Spread the loveದಾವಣಗೆರೆ: ಶಾಮನೂರು ಶಿವಶಂಕರಪ್ಪ  ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ  ಬಿಜೆಪಿಯಿಂದ ಯಾರೇ ಸ್ಪರ್ಧಿಸಿದರೂ ಗೆಲ್ಲಿಸುತ್ತೇವೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ