Breaking News

ಸ್ಪೀಕರ್ ಸಿಟ್ಟಿಗೆ​​ ಮೂವರು ಅಧಿಕಾರಿಗಳ ತಲೆದಂಡ

Spread the love

ಬೆಂಗಳೂರು: ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆಗಿ ಸದನ ಮುಂದೂಡಿದ್ದಲ್ಲದೆ ಪೀಠದಿಂದಲೇ ಎದ್ದು ಹೊರ ನಡೆದ ಯು.ಟಿ. ಖಾದರ್​​ ಅವರನ್ನು ಸಿಎಂ ಸಿದ್ದರಾಮಯ್ಯ ಅಂತಿಮವಾಗಿ ಮನವೊಲಿಸಿದ್ದಾರೆ. ಸ್ಪೀಕರ್ ಸಿಟ್ಟಿಗೆ ಕಂದಾಯ, ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯುಡಿ ಇಲಾಖೆಗಳ ಒಟ್ಟು ಮೂವರು ಅಧಿಕಾರಿಗಳ ತಲೆದಂಡವಾಗಿದೆ.  ಜೊತೆಗೆ ಸಮರ್ಪಕ ಉತ್ತರ ಕೊಡದ 3-4 ಇಲಾಖೆ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಉತ್ತರ ಒದಗಿಸದ ಪಿಡಬ್ಲ್ಯುಡಿ, ಪಶುಸಂಗೋಪನೆ, ಸಾರಿಗೆ, ಐಟಿ-ಬಿಟಿ, ಡಿಪಿಎಆರ್ ಮತ್ತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ನೀಡಲು ಸಿಎಂಗೆ ಸ್ಪೀಕರ್​​ ತಿಳಿಸಿರುವ ಹಿನ್ನೆಲೆ, ಹಿರಿಯ ಐಎಎಸ್ ಅಧಿಕಾರಿಗಳೂ ಆದ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ ಬಿಸಿ ಮುಟ್ಟಿದೆ. ಮತ್ತೊಂದೆಡೆ ಸಿಎಂ ಸೂಚನೆ ಹಿನ್ನೆಲೆ ಮಧ್ಯಾಹ್ನ ಸಿಎಸ್‌ ಶಾಲಿನಿ ರಜನೀಶ್​​ ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆದಿದ್ದಾರೆ.

ಅಂತಿಮವಾಗಿ ಸ್ವೀಕರ್​ ಸಂಧಾನ ಯಶಸ್ವಿ ಹಿನ್ನೆಲೆ ವಿಧಾನಸಭೆ ಕಲಾಪ ಪುನಾರಂಭವಾಗಿದೆ. ಸಭೆಯಲ್ಲಿ ಲಿಖಿತ ರೂಪದ ಪ್ರಶ್ನೆಗಳಿಗೆ ಉತ್ತರ ನೀಡುವ ಬಗ್ಗೆ ಚರ್ಚೆ ನಡೆಸಿದ್ದೇವೆ. ಎಲ್ಲ ಶಾಸಕರಿಗೆ ಉತ್ತರ ಸಿಗಬೇಕು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ವಿಪಕ್ಷ ನಾಯಕರೆಲ್ಲರೂ ಸೇರಿ ಚರ್ಚಿಸಿದ್ದೇವೆ. ಎಲ್ಲರಿಗೂ ಉತ್ತರ ಸಿಗುವ ಬಗ್ಗೆ ಕ್ರಮಕೈಗೊಳ್ಳುವುದಾಗಿ ಸಿಎಂ ಹೇಳಿರೋದಾಗಿ ಸ್ಪೀಕರ್​ ಖಾದರ್​​ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಹೆರಿಗೆಗೆ 15 ದಿನ ಮುಂಚಿತವಾಗಿಯೇ ಶಿಕ್ಷಕಿಯರಿಗೆ ರಜೆ: ಮಧು ಬಂಗಾರಪ್ಪ

Spread the loveಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಹೆರಿಗೆಗೆ ಹೋಗುವ ಶಿಕ್ಷಕಿಯರಿಗೆ 15 ದಿನ ಮುಂಚೆಯೇ ರಜೆ ಕೊಡಬೇಕು ಎಂಬ ನಿಯಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ