Breaking News

ಏ.14ರ ಅಂಬೇಡ್ಕರ್ ಜನ್ಮ ದಿನಾಚರಣೆ ಪೂರ್ವಭಾವಿ ಸಭೆ

Spread the love

ಬೆಳಗಾವಿ: ಪ್ರತಿ ವರ್ಷದಂತೆ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣೆ ಅಂಬೇಡ್ಕರ್ ಉದ್ಯಾನವನದಲ್ಲಿ ಏಪ್ರಿಲ್ 14 ರಂದು ಅರ್ಥಪೂರ್ಣ, ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಡಾ.ಅಂಬೇಡ್ಕರ್ ಜನ್ಮ ದಿನಾಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ ಪ್ರಮುಖ ವೃತ್ತಗಳಲ್ಲಿ ಬ್ಯಾನರ್ ಅಳವಡಿಕೆ ಸೇರಿದಂತೆ ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಕುಡಿಯುವ ನೀರು, ಅಲ್ಪೋಪಹಾರ ಒದಗಿಸಬೇಕು. ಕಾರ್ಯಕ್ರಮದ ಕುರಿತು ಶಿಷ್ಟಾಚಾರದನ್ವಯ ಆಂಮತ್ರಣ ಪತ್ರಿಕೆಗಳನ್ನು ಮುದ್ರಿಸಿ ಜನಪ್ರತಿನಿಧಿಗಳಿಗೆ ಹಾಗೂ ಗಣ್ಯರಿಗೆ ಮುಂಚಿತವಾಗಿ ತಲುಪಿಸಬೇಕು. ಮೆರವಣಿಗೆ ಸಮಯದಲ್ಲಿ ಡಾಲ್ಬಿ, ಡಿಜೆ ಇನ್ನಿತರ ಮಾರಕ ಧ್ವನಿವರ್ಧಕಗಳ ಅಳವಡಿಕೆ, ಬಳಕೆ ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದ ಅವರು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ಹಾಗೂ ಗ್ರಾಮ ಪಂಚಾಯತ ಮತ್ತು ಸಹಕಾರ ಸಂಘ ಸಂಸ್ಥೆಗಳಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ಕಡ್ಡಾಯವಾಗಿ ಆಚರಿಸಲು ಸೂಚಿಸಿದರು.
 ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ, ಎಸ್ಪಿ ಕೆ. ರಾಮರಾಜನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ಮಹಾದೇವ ತಳವಾರ, ಭಾವಕಣ್ಣ ಭಂಗ್ಯಾಗೋಳ, ಕರೆಪ್ಪ ಗುಡ್ಡೆನ್ನವರ, ಸಿದ್ರಾಯಿ ಮೇತ್ರಿ, ಮಹೇಶ್ ಶೀಗಿಹಳ್ಳಿ, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ