Breaking News

25 ಸಾವಿರ ಲಂಚ ಪಡೆದು ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ  ಸಿಕ್ಕಿಬಿದ್ದ ಪಿಡಿಓ

Spread the love

ಬಾಕಿ ಸಂಬಳ ನೀಡಲು ಲಂಚ ಪಡೆದ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಹುಣಸೂರು ತಾಲೂಕು ಮುಳ್ಳೂರು ಗ್ರಾಮ ಪಂಚಾಯ್ತಿ ಪಿಡಿಓ ಮಂಜುಳಾ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಅಧಿಕಾರಿ.25 ಸಾವಿರ ಲಂಚ ಪಡೆದು ಕಚೇರಿಯಲ್ಲೇ ಮಂಜುಳಾ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.

ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ಸ್ವಾಮಿ ಎಂಬುವರು ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟಿದ್ದಾರೆ.ಅನುಕಂಪದ ಆಧಾರದ ಮೇಲೆ ಸ್ವಾಮಿ ರವರ ಮಗ ಮಹದೇವ್ ಎಂಬುವರಿಗೆ ಕೆಲಸ ಸಿಕ್ಕಿದೆ.ತಂದೆ ಕರ್ತವ್ಯ ನಿರ್ವಹಿಸಿದ್ದ ಎರಡು ವರ್ಷದ ಸಂಬಳ ಬಾಕಿ ಪಡೆಯಲು ಮಹದೇವ್ ಮುಂದಾಗಿದ್ದಾರೆ.ಸುಮಾರು ನಾಲ್ಕು ಲಕ್ಷ ಸಂಬಳ ನೀಡಲು ಮಂಜುಳ 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ.ಮಂಜುಳಾ ಕಿರುಕುಳಕ್ಕೆ ಬೇಸತ್ತ ಮಹದೇವ್ ಲೋಕಾಯುಕ್ತ ಮೊರೆ ಹೋಗಿದ್ದಾರೆ.ಮಹದೇವ್ ರಿಂದ 25 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.ಈ ವೇಳೆ ಮಂಜುಳಾ ತನ್ನ ಕೈಯನ್ನ ಹರಿತವಾದ ಆಯುಧದಿಂದ ಕೊಯ್ದುಕೊಂಡಿದ್ದಾರೆಂದು ಹೇಳಲಾಗಿದೆ.ಗಾಯಗೊಂಡ ಮಂಜುಳಾರನ್ನ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಹೇಳಲಾಗಿದೆ. ಸಧ್ಯ ಮುಳ್ಳೂರು ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ ವಿಚಾರಣೆ ನಡೆಯುತ್ತಿದೆ…


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ