Breaking News

ಬಿಜೆಪಿ ಅವಧಿಯ ಅಭಿವೃದ್ಧಿ ಕೆಲಸಗಳೆ ಗೆಲುವಿಗೆ ಶ್ರೀರಕ್ಷೆ : ಪಿ. ರಾಜೀವ

Spread the love

ಬಿಜೆಪಿಯಿಂದ ಉಪ ಚುನಾವಣಾ ಪೂರ್ವ ಭಾವಿ ಸಭೆ

ಬಾಗಲಕೋಟೆ : ಕಳೆದ ಮೂರು ವರ್ಷಗಳ ಅಭಿವೃದ್ಧಿ ಶೂನ್ಯ, ಬರಿ ಹಗರಣಗಳ ಕಾಂಗ್ರೆಸ್ಸ ಸರಕಾರದಿಂದ ಜನ ಬೇಸತ್ತು ಹೋಗಿದ್ದು ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಲು ಬಾಗಲಕೋಟೆ ಜನ ತುದಿಗಾಲಿನ ಮೇಲೆ ನಿಂತಿದ್ದಾರೆ, ಇಲ್ಲಿ ಕ್ಷೇತ್ರದ ಅಭಿವೃದ್ಧಿಯೇ ನಮ್ಮ ಮಂತ್ರವಾಗಿದೆ ಎಂದು ರಾಜ್ಯ ಪ್ರದಾನ ಕಾರ್ಯದರ್ಶಿ ಪಿ. ರಾಜೀವ್ ಹೇಳಿದರು,
ಅವರು ನವನಗರದ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಾಲಯದ ಸಭಾಂಗಣದಲ್ಲಿ ಬುಧವಾರ ನಡೆದ ಉಪ ಚುನಾವಣೆಯ ಪೂರ್ವ ಭಾವಿ ಸಭೆಯನ್ನೂದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದಾಗ ಇಲ್ಲಿ ಡಾ.ವೀರಣ್ಣ ಚರಂತಿಮಠರು ಶಾಸಕರಾಗಿದ್ದ ಅವಧಿಯಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಅನುಧಾನ ತಂದು ಬಾಗಲಕೋಟೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಾರೆ, ಮತ್ತೆ ಇಂದು ಉಪ ಚುನಾವಣೆ ಬಂದಿದ್ದರಿಂದ ಬಿಜೆಪಿ ಸರಕಾರದ ಸಾಧನೆಗಳು ಹಾಗೂ ಕೇಂದ್ರ ಸರಕಾರದ ಸಾಧನೆಗಳು ಜೋತಗೆ ಸ್ಥಳಿಯ ಅಭಿವೃದ್ಧಿ ಕೆಲಸಗಳೇ ನಮ್ಮ ಗೇಲುವಿಗೆ ಶ್ರೀರಕ್ಷೆಯಾಗಲಿದೆ ಎಂದರು.
ಮಾಜಿ ಉಪಮುಖ್ಯಂತ್ರಿಗಳು ಚಿತ್ರದುರ್ಗದ ಸಂಸದರಾದ ಗೋವಿಂದ ಕಾರಜೋಳ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ವೀಕಸಿತ ಭಾರತವಾಗಿ ಹೊರಹೊಮ್ಮುತ್ತಿದೆ, ರಾಜ್ಯದಲ್ಲೂ ಕೂಡಾ ಬಿಜೆಪಿ ಸರಕಾರವಿದ್ದ ಅವಧಿಯಲ್ಲಿ ಎಲ್ಲರಿಗೂ ಸಮಪಾಲು ಎಲ್ಲರಿಗೂ ಸಮಬಾಳು ತತ್ವದಲ್ಲಿ ಸಾಕಷ್ಟು ಯೋಜನೆಗಳ ಮೂಲಕ ಅಭಿವೃದ್ಧಿ ಕಾರ್ಯಗಳು ಜರುಗಿದೆ, ರಾಜ್ಯದಲ್ಲಿಯೇ ಕ್ಷೇತ್ರದ ಅಭಿವೃದ್ಧಿಗಾಗಿ ಹೆಚ್ಚಿನ ಅನುಧಾನವನ್ನು ತಂದು ಒಂದು ಮಾದರಿ ಕ್ಷೇತ್ರವನ್ನಾಗಿಸುವಲ್ಲಿ ಮಾಜಿ ಶಾಸಕರಾದ ಡಾ.ವೀರಣ್ಣ ಚರಂತಿಮಠರ ಪಾತ್ರ ದೊಡ್ಡದಿದೆ, ರಾಜ್ಯದಲ್ಲಿ ಈ ಕಾಂಗ್ರೆಸ್ಸ ಸರಕಾರ ಯಾರಿಗೂ ಬೇಡವಾಗಿದೆ, ಬಾಗಲಕೋಟೆಯಲ್ಲಂತು ಕಳೆದ ಮೂರು ವರ್ಷಗಳಲ್ಲಿ ಅಭಿವೃದ್ಧಿ ಶೂನ್ಯ ಆವರಿಸಿದೆ, ಬಾಗಲಕೋಟೆಯ ಎಲ್ಲ ಬಿಜೆಪಿ ನಾಯಕರು ಒಗ್ಗಟ್ಟಿನಿಂದ ಈ ಚುನಾವಣೆಯನ್ನು ಎದುರಿಸುತ್ತೆವೆ ಮತ್ತು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುತ್ತೆವೆ ಎಂದರು.
ಸಭೆಯ ಅಧ್ಯಕ್ಷತೆಯನ್ನು ವಹಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿ ಈ ಉಪ ಚುನಾವಣೆಯನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ, ನಮ್ಮ ಕಾರ್ಯಕರ್ತರ ಶಕ್ತಿಯೊಂದಿಗೆ ಜನರ ಆಸೆಯಂತೆ ಮೊತ್ತೊಮ್ಮೆ ಬಿಜೆಪಿ ಗೇಲ್ಲುವುದು ಶತಸಿದ್ದ ಎಂದರು.
ರಾಜ್ಯ ಸಭಾ ಸದಸ್ಯರಾದ ನಾರಾಯಣಸಾ ಭಾಂಡಗೆ, ಬೆಳಗಾವಿ ವಿಭಾಗ ಪ್ರಭಾರಿ ಸಂಜಯ ಪಾಟೀಲ, ಚುನಾವಣಾ ಉಸ್ತುವಾರಿ ಅರುಣ ಶಾಹಪುರ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಮಾಜಿ ಶಾಸಕರಾದ ಡಾ.ವೀರಣ್ಣ ಚರಂತಿಮಠ, ಹುನಗುಂದದ ದೊಡ್ಡನಗೌಡ ಪಾಟೀಲ, ಬದಾಮಿಯ ಎಂ.ಕೆ.ಪಟ್ಟಣಶೆಟ್ಟಿ, ಉಮೇಶ ಕಾರಜೋಳ, ಬಸವರಾಜ ಯಂಕಂಚಿ, ರಾಜು ನಾಯ್ಕರ, ಮಲ್ಲಯ್ಯ ಮೂಗನೂರಮಠ. ಸಭೆಯ ವೇದಿಕೆ ಮೇಲೆ ಇದ್ದರು.
ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು.


Spread the love

About Laxminews 24x7

Check Also

ಬಸವೇಶ್ವರ ಪ.ಪೂ ವಾಣಿಜ್ಯ ಮಹಾವಿದ್ಯಾಲಯದ ಫಲಿತಾಂಶ : ಶೇ.88.10%

Spread the loveಬಾಗಲಕೋಟೆ: 2025-26ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿಯ ಫಲಿತಾಂಶ ಪ್ರಕಟವಾಗಿದ್ದು, ಮಹಾವಿದ್ಯಾಲಯದ ಕುಮಾರ ಮಂಥನ ಮಹಾವೀರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ