Breaking News

ರಾಜ್ಯದ 5000 ಅಂಗನವಾಡಿಗಳಲ್ಲಿ `LKG-UKG’ ಆರಂಭ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ

Spread the love

ಬೆಂಗಳೂರು: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ಸರ್ಕಾರ ಮುಂದಾಗಿದ್ದು, ಪ್ರಸಕ್ತ ಸಾಲಿನಲ್ಲಿ ರಾಜ್ಯದ 5000 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ (LKG ಮತ್ತು UKG) ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗುಣಮಟ್ಟದ ಶಿಕ್ಷಣ: ಅಂಗನವಾಡಿಗಳಲ್ಲಿ ಕೇವಲ ಪೌಷ್ಟಿಕ ಆಹಾರ ನೀಡುವುದಷ್ಟೇ ಅಲ್ಲದೆ, ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದರು.

ಪದವೀಧರ ಶಿಕ್ಷಕರು: ರಾಜ್ಯದ ಅಂಗನವಾಡಿಗಳಲ್ಲಿ ಸದ್ಯ ಬಿ.ಎ, ಬಿ.ಎಡ್, ಎಂ.ಎ ಮತ್ತು ಎಂ.ಕಾಂ ಪದವಿ ಪಡೆದ ಸುಮಾರು 17,000 ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಸೇವೆಯನ್ನು ಮಾಂಟೆಸ್ಸರಿ ಶಿಕ್ಷಣಕ್ಕೆ ಸಮರ್ಥವಾಗಿ ಬಳಸಿಕೊಳ್ಳಲಾಗುವುದು.

ಗೌರವಧನದಲ್ಲಿ 4ನೇ ಸ್ಥಾನ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಅತಿ ಹೆಚ್ಚು ಗೌರವಧನ ನೀಡುವ ರಾಜ್ಯಗಳಲ್ಲಿ ಕರ್ನಾಟಕ ದೇಶದಲ್ಲೇ 4ನೇ ಸ್ಥಾನದಲ್ಲಿದೆ. ಹರಿಯಾಣ, ತೆಲಂಗಾಣ ಮತ್ತು ಕೇರಳ ರಾಜ್ಯಗಳ ನಂತರ ಕರ್ನಾಟಕ ಅತಿ ಹೆಚ್ಚು ಗೌರವಧನ ನೀಡುತ್ತಿದೆ ಎಂದು ಸಚಿವರು ವಿವರಿಸಿದರು.

ಸರ್ಕಾರದ ಯೋಜನೆಗಳನ್ನು ಸಾಮಾನ್ಯ ಜನರಿಗೆ ತಲುಪಿಸುವಲ್ಲಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಪ್ರಮುಖ ಪಾತ್ರ ವಹಿಸುತ್ತಿದ್ದು, ಅವರ ಬಗ್ಗೆ ಸರ್ಕಾರ ವಿಶೇಷ ಕಾಳಜಿ ಹೊಂದಿದೆ ಎಂದು ಅವರು ತಿಳಿಸಿದರು. ಸರ್ಕಾರಿ ಮಾಂಟೆಸ್ಸರಿಗಳ ಮೂಲಕ ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಉತ್ತಮ ಅಡಿಪಾಯದ ಶಿಕ್ಷಣ ನೀಡಲು ಸರ್ಕಾರ ಈ ಯೋಜನೆ ರೂಪಿಸಿದೆ.


Spread the love

About Laxminews 24x7

Check Also

ವೈಷ್ಣೋದೇವಿ ಯಾತ್ರೆಗೂ ಸರ್ಕಾರದಿಂದ ಸಹಾಯ ಧನ: ರಾಮಲಿಂಗಾರೆಡ್ಡಿ

Spread the loveಬೆಂಗಳೂರು: ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ  ಭೇಟಿ ನೀಡುವ ಯಾತ್ರಿಗಳಿಗೆ ತಲಾ 5 ಸಾವಿರ ಸಹಾಯಧನ ಯೋಜನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ