Breaking News

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಶಾಸಕ ಅಭಯ ಪಾಟೀಲ್ ಗೆ ಸುಪ್ರೀಂ ಕೋರ್ಟ್ ನೋಟಿಸ್

Spread the love

ದೆಹಲಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ಗೆ ಸುಪ್ರೀಂಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.

ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ರದ್ದುಪಡಿಸಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ 4 ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ನ್ಯಾಯಪೀಠ ಶಾಸಕ ಅಭಯ್ ಪಾಟೀಲ್ ಗೆ ನೋಟಿಸ್ ಜಾರಿ ಮಾಡಿ ನಾಲ್ಕು ವಾರದಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಸೂಚಿಸಿದೆ. ಶಾಸಕ ಅಭಯ್ ಪಾಟೀಲ್ ತಮ್ಮ ಮತ್ತು ಕುಟುಂಬದವರ ಹೆಸರಿನಲ್ಲಿ ಘೋಷಿತ ಆದಾಯಕ್ಕಿಂತ ಹೆಚ್ಚಿನ ಮೌಲ್ಯದ ಆಸ್ತಿ ಸಂಪಾದಿಸಿರುವುದಾಗಿ ಸುಜಿತ್ ಮುಳಗುಂದ ದೂರಿನ ಆಧಾರದ ಮೇಲೆ ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ