Breaking News

ಪವಿತ್ರ ರಂಜಾನ್ ಹಬ್ಬದಂದು ಭಾವೈಕ್ಯತೆ ಮೆರೆದ ಮುಸ್ಲಿಂ ಬಾಂಧವರು – 3 ಸಾವಿರ ಮಠಕ್ಕೆ ತೆರಳಿ ನಮನ

Spread the love

ಹುಬ್ಬಳ್ಳಿ: ಪವಿತ್ರ ರಂಜಾನ್ ಹಬ್ಬವನ್ನು ವಾಣಿಜ್ಯ ನಗರದಲ್ಲಿ ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ವಿವಾದಿತ ಈದ್ಗಾ ಮೈದಾನದಲ್ಲಿ ಲಕ್ಷಾಂತರ ಮುಸ್ಲಿಮರು ಏಕಕಾಲದಲ್ಲಿ ರಂಜಾನ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಹುಬ್ಬಳ್ಳಿಯ ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಅಂಬೇಡ್ಕರ್, ಹೊಸೂರು, ಕಮರಿಪೇಟೆ ಸೇರಿದಂತೆ ಪ್ರಮುಖ ವೃತ್ತಿಗಳಲ್ಲಿ ಸಂಚಾರ ಬಂದ್ ಮಾಡಿ, ಪ್ರಾರ್ಥನೆಗೆ ಅನುವು ಮಾಡಿಕೊಡಲಾಗಿತ್ತು. ಪ್ರಾರ್ಥನೆ ಬಳಿಕ ಅಂಜುಮನ್ ಇಸ್ಲಾಮಿಕ್ ಸಂಸ್ಥೆಯ ಮುಖಂಡರು ಹಾಗೂ ಮುಸ್ಲಿಂ ಮುಖಂಡರು 3 ಸಾವಿರ ಮಠಕ್ಕೆ ತೆರಳಿ, ದೇವರ ದರ್ಶನ ಪಡೆದು ಭಾವೈಕ್ಯತೆ ಮೆರದರು.

ಮಠದ ಪೀಠಾಧಿಪತಿ ಮೂಜಗು ಅನುಪಸ್ಥಿತಿಯಲ್ಲಿ, ಶಿವಮೊಗ್ಗ ಜಿಲ್ಲೆ ಆನಂದಪುರ ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಶ್ರೀಗಳು ಮುಸ್ಲಿಂ ಭಕ್ತರಿಗೆ ಆರ್ಶೀವದಿಸಿ ಹಬ್ಬದ ಶುಭಕೋರಿದರು.


Spread the love

About Laxminews 24x7

Check Also

ಹುಬ್ಬಳ್ಳಿಯಲ್ಲಿ ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ ಅವರಿಗೆ ಗೌರವ ಸನ್ಮಾನ

Spread the loveಹುಬ್ಬಳ್ಳಿ ನಗರದ ಶತಮಾನೋತ್ಸವದ ಸ್ಮರಣಾರ್ಥ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮದಲ್ಲಿ ಭಾರತ ತಂಡದ ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ