Breaking News

ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಚಿನ್ನ ಕೊಡೋದಾಗಿ ವಂಚನೆ – 30 ಲಕ್ಷ ಪಡೆದು ಪರಾರಿಯಾಗಿದ್ದ ಆರೋಪಿಗಳು ಅರೆಸ್ಟ್

Spread the love

ಬಳ್ಳಾರಿ: ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆ ಚಿನ್ನ ಕೊಡೋದಾಗಿ ವಂಚಿಸಿ, 30 ಲಕ್ಷ ರೂ. ಪಡೆದು ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಕೂಡ್ಲಿಗಿಯ ಲಿಂಗನಹಳ್ಳಿ ಗ್ರಾಮದ ಸುರೇಶ್ ಹಾಗೂ ಸೋಮಣ್ಣ ಬಂಧಿತ ಆರೋಪಿಗಳು. ಚೆನ್ನೈ ಮೂಲದ ಗುತ್ತಿಗೆದಾರನಿಂದ 30 ಲಕ್ಷ ರೂ. ಪಡೆದು ಪರಾರಿಯಾಗಿದ್ದರು.

ಆರೋಪಿಗಳು ಚೆನ್ನೈ ಮೂಲದ ಗುತ್ತಿಗೆದಾರ ಜಿ ಕುಮಾರ್ ಅವರಿಗೆ ಕಡಿಮೆ ಬೆಲೆಗೆ ಬಂಗಾರ ಕೊಡೋದಾಗಿ ಹೇಳಿದ್ದರು. ಅದರಂತೆ ಗುತ್ತಿಗೆದಾರನನ್ನು ಚೆನ್ನೈನಿಂದ ಕೂಡ್ಲಿಗಿಯ ಕ್ಯಾಸನಕೆರೆ ಗ್ರಾಮದ ಅರಣ್ಯ ಪ್ರದೇಶಕ್ಕೆ ಕರೆಸಿಕೊಂಡಿದ್ದರು. ಬಳಿಕ ಅಲ್ಲಿ ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆಗೆ ಚಿನ್ನ ಕೊಡೋದಾಗಿ ಹೇಳಿ, 30 ಲಕ್ಷ ರೂ. ಹಣ ಪಡೆದು ಎಸ್ಕೇಪ್ ಆಗಿದ್ದರು.

ಈ ಸಂಬಂಧ ಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪ್ರಕರಣ ಕೈಗೆತ್ತಿಕೊಂಡಿದ್ದ ಪೊಲೀಸರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಂಧಿತ ಆರೋಪಿಗಳಿಂದ 29.50 ಲಕ್ಷ ರೂ. ಹಣ ವಶಕ್ಕೆ ಪಡೆದಿದ್ದಾಜನಕರೆ.


Spread the love

About Laxminews 24x7

Check Also

ನಕಲಿ ಪ್ರಮಾಣ ಪತ್ರ ವಿತರಣೆ ತಡೆಗಟ್ಟಿ – ನಾಗೇಂದ್ರ ಮನೆ ವಾಲ್ಮೀಕಿ ಸಮುದಾಯದಿಂದ ಪ್ರತಿಭಟನೆ

Spread the loveಬಳ್ಳಾರಿ: ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣಪತ್ರ ವಿತರಣೆ ತಡೆಗಟ್ಟಲು ಒತ್ತಾಯಿಸಿ ಬಳ್ಳಾರಿ ಗ್ರಾಮೀಣ ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ