Breaking News

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ನಾಲ್ವರು ಸ್ಥಳದಲ್ಲೇ ಸಾವು

Spread the love

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್‌ ಡಿಕ್ಕಿಯಾಗಿ (Aನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮೃತರನ್ನು ಕೇರಳ ಮೂಲದ ಮಹಮ್ಮದ್ ಪರಾನ್ (22), ರಫೀಜ್ (45) ಹಾಗೂ ಬೆಂಗಳೂರು ಮೂಲದ ರಶೀದ್‌(45), ಸಕೀರ್ (27) ಎಂದು ಗುರುತಿಸಲಾಗಿದೆ. ಕೇರಳ ಮೂಲದ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್‌ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಚನ್ನಪಟ್ಟಣ  ತಾಲೂಕಿನ ಪುಟ್ಟಪ್ಪನದೊಡ್ಡಿ ಬಳಿ ಬಸ್‌ ಡಿವೈಡರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ನಿದ್ದೆ ಮಂಪರಿನಲ್ಲಿ ಇದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಮೃತದೇಹಗಳನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೆಚ್ಚಿನ ಹಣದ ಆಸೆಗೆ ಬಸ್ ಡ್ರೈವರ್, ಸೀಟ್ ಇಲ್ಲದಿದ್ರೂ ಮುಂಭಾಗದ ಕ್ಯಾಬಿನಲ್ಲಿ ನಾಲ್ವರನ್ನೂ ಕೂರಿಸಿದ್ದರಿಂದ ಅಪಘಾತದ ರಭಸಕ್ಕೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.


Spread the love

About Laxminews 24x7

Check Also

ಕಾಂಗ್ರೆಸ್‌ಗೆ ಯಾರೂ ಬ್ಲ್ಯಾಕ್‌ಮೇಲ್‌ ಮಾಡಲು ಆಗುವುದಿಲ್ಲ: ಎಂ.ಬಿ.ಪಾಟೀಲ್‌

Spread the loveಬೆಂಗಳೂರು: ಕಾಂಗ್ರೆಸ್‌ಗೆ ಯಾರೂ ಒತ್ತಡ ಹೇರಲು ಆಗುವುದಿಲ್ಲ. ಬ್ಲ್ಯಾಕ್‌ಮೇಲ್‌ ಮಾಡಲಿಕ್ಕೂ ಆಗುವುದಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ