ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭಾ ಬಜೆಟ್ ಅಧಿವೇಶನದಲ್ಲಿ, ಸವದತ್ತಿ ಯಲ್ಲಮ್ಮ ಕ್ಷೇತ್ರದ ಪರವಾಗಿ ಧಾರ್ಮಿಕ ದತ್ತಿ ಇಲಾಖೆಯ (ಮುಜರಾಯಿ) ಸಿಬ್ಬಂದಿಗಳ ಕುಟುಂಬದ ಹಿತದೃಷ್ಟಿಯಿಂದ ಹಾಗೂ ವಿಶೇಷವಾಗಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ನೇಮಕಾತಿ ಕುರಿತು ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ಶ್ರೀ Ramalinga Reddy ಅವರಿಗೆ ಪ್ರಮುಖ ಪ್ರಶ್ನೆಗಳನ್ನು ಮಂಡಿಸಿ, ಚರ್ಚೆ ನಡೆಸಲಾಯಿತು.
ಚರ್ಚೆಯ ಪ್ರಮುಖಾಂಶಗಳು:
🔹 ಯಲ್ಲಮ್ಮ ದೇವಸ್ಥಾನದ ನೇಮಕಾತಿ: ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಹಾಗೂ ಅಲ್ಲಿನ ಸಿಬ್ಬಂದಿಗಳ ಹಿತರಕ್ಷಣೆಯ ಕುರಿತು ಸರ್ಕಾರದ ಗಮನ ಸೆಳೆದು ಸವಿಸ್ತಾರವಾಗಿ ಚರ್ಚಿಸಲಾಯಿತು.
🔹 ಅನುಕಂಪದ ಆಧಾರದ ನೇಮಕಾತಿ: ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳು ಮರಣ ಹೊಂದಿದಲ್ಲಿ, ಅವರ ಕುಟುಂಬದವರಿಗೆ ಅನುಕಂಪದ ಆಧಾರದ ಮೇಲೆ ಕೆಲಸ ನೀಡುವ ಪ್ರಕ್ರಿಯೆ ಸ್ಥಗಿತಗೊಂಡಿರುವ ಬಗ್ಗೆ ಸಚಿವರ ಸ್ಪಷ್ಟನೆ ಕೋರಲಾಯಿತು.
🔹 ಸಿಬ್ಬಂದಿಗಳ ಭವಿಷ್ಯ: ಇಲಾಖೆಯ ಕಾಯ್ದೆಯ ಅಡಿಯಲ್ಲಿ ಇಂತಹ ನೇಮಕಾತಿಗೆ ಇರುವ ಅವಕಾಶಗಳ ಬಗ್ಗೆ ಚರ್ಚಿಸಿ, ಸಿಬ್ಬಂದಿಗಳ ಕುಟುಂಬಕ್ಕೆ ಶೀಘ್ರವಾಗಿ ನ್ಯಾಯ ಒದಗಿಸುವಂತೆ ಒತ್ತಾಯಿಸಲಾಯಿತು.
ದೇವಸ್ಥಾನಗಳ ಸೇವೆಯಲ್ಲಿರುವ ಸಿಬ್ಬಂದಿಗಳ ಮತ್ತು ಅವರ ಕುಟುಂಬದ ಹಿತರಕ್ಷಣೆ ನಮ್ಮ ಆದ್ಯತೆಯಾಗಿದೆ. ಈ ಕುರಿತು ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ಸಿಗುವ ಭರವಸೆ ಇದೆ.
Laxmi News 24×7