Breaking News

ಡಿ.ಕೆ.ಶಿವಕುಮಾರ್ ಅವರಿಗೆ ಧನ್ಯವಾದ ಸಲ್ಲಿಸಿದ ಬೆಳಗಾವಿ ಮುಖಂಡರು

Spread the love

ಬೆಂಗಳೂರು: ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ ಬ್ಲಾಕ್ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಬಾಳು ದೇಸೂರಕರ್ ಅವರನ್ನು, ಕಾಡಾ ಅಧ್ಯಕ್ಷರನ್ನಾಗಿ ಯುವರಾಜ ಕದಂ ಅವರನ್ನು ಹಾಗೂ ಧಾರವಾಡ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾಗಿ ಅಡಿವೇಶ್ ಇಟಗಿ ಅವರನ್ನು ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಕೃತಜ್ಞತೆ ಸಲ್ಲಿಸಿ ಗೌರವ-ಪೂರ್ವಕವಾಗಿ ಸನ್ಮಾನಿಸಲಾಯಿತು.

ನೂತನವಾಗಿ ನೇಮಕಗೊಂಡಿರುವ ಎಲ್ಲ ಮುಖಂಡರು ಹಾಗೂ ಕ್ಷೇತ್ರದ ಪ್ರಮುಖರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ನೇತೃತ್ವದಲ್ಲಿ ಶಿವಕುಮಾರ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ನೂತನವಾಗಿ ಜವಾಬ್ದಾರಿ ವಹಿಸಿಕೊಂಡಿರುವ ಎಲ್ಲಾ ಪದಾಧಿಕಾರಿಗಳ ಜವಾಬ್ದಾರಿ, ಪಕ್ಷದ ಸಂಘಟನೆ ಮತ್ತು ಸಾರ್ವಜನಿಕ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಕುರಿತು ಡಿ.ಕೆ.ಶಿವಕುಮಾರ ಅವರು ಸಲಹೆ ನೀಡಿದರು.
ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಚನ್ನರಾಜ ಹಟ್ಟಿಹೊಳಿ ಅವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರ ಮತ್ತು ಜಿಲ್ಲೆಯಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸುವುದಾಗಿ ಎಲ್ಲ ಮುಖಂಡರು ವಾಗ್ದಾನ ಮಾಡಿದರು.


Spread the love

About Laxminews 24x7

Check Also

ನಷ್ಟದಲ್ಲಿರುವ ಉದ್ಯಮಗಳಿಗೆ ಡಿಸಿಸಿ ಬ್ಯಾಂಕ್ ಸಾಲ ನೀಡದಂತೆ ಆಗ್ರಹ

Spread the loveಬೆಳಗಾವಿ : ಬಿಡಿಸಿಸಿ ಬ್ಯಾಂಕ್ ಜಿಲ್ಲೆಯಲ್ಲಿ ನಷ್ಟದಲ್ಲಿರುವ ಕೆಲವು ಕಾರ್ಖಾನೆ ಮತ್ತು ಉದ್ಯಮಗಳಿಗೆ ಕೋಟ್ಯಂತರ ರೂಪಾಯಿ ಸಾಲ ಕೊಡಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ