Breaking News

ಅಮೆರಿಕದ ಜೊತೆ ಶಾಂತಿ ಮಾತುಕತೆಗೆ ಒಪ್ಪಿಕೊಂಡ ಮೊಜ್ತಬಾ ಖಮೇನಿ

Spread the love

ವಾಷಿಂಗ್ಟನ್‌: ಅಮೆರಿಕದ  ಜೊತೆ ಮಾತುಕತೆ ನಡೆಸಲು ಇರಾನಿನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಮೊಜ್ತಬಾ ಖಮೇನಿ ಅಮೆರಿಕದ ಜೊತೆ ಶಾಂತಿ ಮಾತುಕತೆ ನಡೆಸಲು ಒಪ್ಪಿಕೊಂಡಿದ್ದಾರೆ ಎಂದು ಸೌದಿ ಸರ್ಕಾರದ ಅಲ್ ಅರೇಬಿಯಾ  ಮಾಧ್ಯಮ ವರದಿ ಮಾಡಿದೆ. ಈ ವರದಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಇರಾನ್‌ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಸೋಮವಾರ ಟ್ರೂಥ್‌ ಸಾಮಾಜಿಕ ಜಾಲತಾಣದಲ್ಲಿ ಟ್ರಂಪ್‌ ಇರಾನ್ ದೇಶದ ಜೊತೆ ಕಳೆದ ಎರಡು ದಿನಗಳಲ್ಲಿ ಉತ್ತಮ ಮಾತುಕತೆ ನಡೆದಿದೆ. ಫಲಪ್ರದವಾದ ಮಾತುಕತೆ ನಡೆದ ಹಿನ್ನೆಲೆಯಲ್ಲಿ ಇರಾನಿನ ವಿದ್ಯುತ್ ಸ್ಥಾವರಗಳು ಮತ್ತು ಇಂಧನ ಮೂಲಸೌಕರ್ಯಗಳ ಮೇಲಿನ ಎಲ್ಲಾ ಮಿಲಿಟರಿ ದಾಳಿಗಳನ್ನು ಐದು ದಿನಗಳ ಅವಧಿಗೆ ಮುಂದೂಡಲು ಸೂಚನೆ ನೀಡಿದ್ದೇನೆ ಎಂದು ಪೋಸ್ಟ್‌ ಮಾಡಿದ್ದರು.

ಈ ಪೋಸ್ಟ್‌ಗೆ ಮೊದಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ 48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನಿಮ್ಮ ವಿದ್ಯುತ್‌ ಸ್ಥಾವರ ನಾಶ ಮಾಡುವುದಾಗಿ ಇರಾನಿಗೆ ಬೆದರಿಕೆ ಹಾಕಿದ್ದರು. ಈ ಡೆಡ್‌ಲೈನ್‌ ಒಳಗಡೆ ಇರಾನ್‌ ತೆರೆಯದೇ ಇದ್ದರೆ ದೊಡ್ಡ ಪ್ರಮಾಣದ ಯುದ್ಧ ನಡೆಯುವ ಸಾಧ್ಯತೆ ಇತ್ತು.

ಅಮೆರಿಕದ ಬೆದರಿಕೆಗೆ ಜಗ್ಗದ ಇರಾನ್‌, ಒಂದು ವೇಳೆ ನಮ್ಮ ಇಂಧನ, ವಿದ್ಯುತ್‌ ಮೂಲಸೌಕರ್ಯಗಳನ್ನು ನಾಶ ಮಾಡಿದರೆ ಮಧ್ಯಪ್ರಾಚ್ಯದಲ್ಲಿರುವ ಇತರ ದೇಶಗಳ ಇಂಧನ, ವಿದ್ಯುತ್‌ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುತ್ತೇವೆ ಎಂದು ತಿರುಗೇಟು ನೀಡಿತ್ತು.


Spread the love

About Laxminews 24x7

Check Also

ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಅಲಿರೆಜಾ ಅರಾಫಿ ಆಯ್ಕೆ

Spread the loveಟೆಹ್ರಾನ್: ಇರಾನ್‌ನ ಇತಿಹಾಸದಲ್ಲೇ ಅತ್ಯಂತ ಭೀಕರ ಕ್ರಾಂತಿ ಮತ್ತು ಬದಲಾವಣೆಯ ಗಾಳಿ ಬೀಸುತ್ತಿದೆ. ಅಮೇರಿಕಾ-ಇಸ್ರೇಲ್ ಜಂಟಿ ವೈಮಾನಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ