Breaking News

ನೀರಿನ ವಿಚಾರಕ್ಕೆ ಗಲಾಟೆ – 2 ಸಮುದಾಯದ 21 ಮಂದಿ ಅರೆಸ್ಟ್‌

Spread the love

ಗದಗ: ಎರಡು ಸಮುದಾಯಗಳ  ನಡುವೆ ನೀರಿನ ವಿಚಾರಕ್ಕೆ ನಡೆದ ಗಲಾಟೆ  ಪ್ರಕರಣಕ್ಕೆ ಸಂಬಂಧಿಸಿದಂತೆ 21 ಮಂದಿಯನ್ನು ಬಂಧನ ಮಾಡಲಾಗಿದೆ.

ಮುಂಡರಗಿ ತಾಲೂಕಿನ ಚಿಕ್ಕ ವಡ್ಡಟ್ಟಿ ಗ್ರಾಮದಲ್ಲಿ ಎಸ್‌ಟಿ (ST) ಜನಾಂಗದ ರೈತನ ಜಮೀನಿನಲ್ಲಿ ದಲಿತ (Dalit) ವ್ಯಕ್ತಿ ನೀರಿನ ಬಳಕೆ ವಿಚಾರಕ್ಕೆ ಗಲಾಟೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಗುಂಪಿನ 21 ಜನರ ಬಂಧನ ಮಾಡಲಾಗಿದೆ ಎಂದು ಗದಗ ಎಸ್‌ಪಿ ರೋಹನ್ ಜಗದೀಶ್ ಹೇಳಿದ್ದಾರೆ.

ಚಿಕ್ಕ ವಡ್ಡಟ್ಟಿ ಗ್ರಾಮದಲ್ಲಿ ಸೋಮವಾರ ಸಂಜೆ ಎಸ್‌ಸಿ ಹಾಗೂ ಎಸ್‌ಟಿ ಜನರ ಮಧ್ಯೆ ಈ ಗಲಾಟೆ ನಡೆದಿತ್ತು. ಎಸ್‌ಟಿ ಜನಾಂಗ ರೈತನ ಜಮೀನಿನಲ್ಲಿ ನೀರಿನ ಹೊಂಡ ಇದೆ. ಅದರಲ್ಲಿ ಎಸ್‌ಸಿ ಯುವಕರು ಈಜಲು ಹೋಗಿದ್ದರು. ಬೇಸಿಗೆಯಲ್ಲಿ ಅನಾವಶ್ಯ ನೀರು ಹಾಳು ಮಾಡಬೇಡಿ. ಜನ ಜಾನುವಾರುಗಳಿಗೆ ನೀರಿಲ್ಲ ಎಂದು ಅದಕ್ಕೆ ಎಸ್‌ಟಿ ರೈತ ವಿರೋಧ ಮಾಡಿದ್ದ.

ವಿರೋಧಿಸಿದ್ದಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಎರಡು ಗುಂಪಿನ 32 ಜನರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಗೊಂಡ ಪೈಕಿ ಕೆಲವನ್ನು ಮುಂಡರಗಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರೆ ಇನ್ನು ಕೆಲವು ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ತಿಂಗಳು ಶಿವರಾತ್ರಿ ಹಬ್ಬದ ಸಂದರ್ಭದಲ್ಲೂ ಸ್ವಲ್ಪ ಗಲಾಟೆ ಆಗಿತ್ತು. ನಂತರ ಹಿರಿಯರ ಸಮ್ಮುಖದಲ್ಲಿ ಮಾತುಕತೆ ನಡೆದು ಸರಿ ಹೋಗಿತ್ತು. ಆದರೆ ಸೋಮವಾರ ಮತ್ತೆ ಹೊಡೆದಾಡಿಕೊಂಡಿದ್ದಾರೆ.

ಚಿಕ್ಕ ವಡ್ಡಟ್ಟಿ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸ್ಥಳದಲ್ಲಿ ಪೊಲೀಸರು ನಿಯೋಜನೆ ಮಾಡಿ ಪರಿಸ್ಥಿತಿ ತಿಳಿಗೊಳಿಸಿದ್ದೆವೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಹಿಸಲಾಗಿದೆ ಎಂದು ಎಸ್ಪಿ ರೋಹನ್ ಜಗದೀಶ್ ಹೇಳಿದರು.


Spread the love

About Laxminews 24x7

Check Also

ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನಕ್ಕೆ ತೆರೆ

Spread the love ಗದಗ: ಐತಿಹಾಸಿಕ ಸ್ಥಳ ಗದಗ  ಜಿಲ್ಲೆ ಲಕ್ಕುಂಡಿಯಲ್ಲಿ ನಡೆಯುತ್ತಿದ್ದ ಉತ್ಖನನ ಕಾಮಗಾರಿಗೆ ಇಂದು ತೆರೆ ಬಿದ್ದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ