ಚಿಕ್ಕೋಡಿ : ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪಿ.ಎಂ ಆವಾಸ , ಜಲ ಜೀವನ, ಸ್ವಾಭಿಮಾನದ ಭಾರತ ಯೋಜನೆಗಳಂತಹ ಜನಪರ ಕಾರ್ಯಕ್ರಮಗಳನ್ನು ನೀಡುವ ಮೂಲಕ ಜನರ ಜೀವನ ಮಟ್ಟದ ಸುಧಾರಣೆಗೆ ಶ್ರಮಿಸುತ್ತಿದೆ ಎಂದು ವಿ.ಪ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಅಭಿಪ್ರಾಯಪಟ್ಟರು.
ಪಟ್ಟಣದ ಕೇಶವ ಕಲಾಭವನದಲ್ಲಿ ಕುಡಚಿ ಮಂಡಲ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ಪಂಡಿತ ದೀನದಯಾಳ್ ಉಪಾಧ್ಯಾಯ ಶಿಕ್ಷಣ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಡ ಮತ್ತು ಮಧ್ಯಮ ವರ್ಗದ ಜನರ ಆರೋಗ್ಯ ಸುರಕ್ಷತೆಗಾಗಿ ಆಯುಷ್ಮಾನ್, ಪಿಎಂ ಸುರಕ್ಷಾ ಯೋಜನೆಗಳು ಸಹಕಾರಿಯಾಗಿದೆ.ಕೃಷಿಕರಿಗೆ ಪಿಎಂ ಕಿಸಾನ್ ,ಫಸಲು ಭೀಮಾ ಯೋಜನೆಗಳ ಲಾಭ ದೊರೆಯುತ್ತಿದೆ.ಮುದ್ರಾ ಯೋಜನೆ ಮೂಲಕ ನಿರುದ್ಯೋಗ ಯುವಕ,ಯುವತಿಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯ ನೀಡಲಾಗುತ್ತಿದೆ.ಕೇಂದ್ರ ಬಿಜೆಪಿ ಸರ್ಕಾರದ ಯೋಜನೆಗಳು ಮನೆ ಮನೆಗೆ ಮುಟ್ಟುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಕೇಂದ್ರ ಸರ್ಕಾರದ ಯೋಜನೆಗಳನ್ನು ಬಣ್ಣಿಸಿದರು.
ಪಕ್ಷದ ಪದಾಧಿಕಾರಿಗಳು ಹಾಗೂ ಪಕ್ಷದ ಸಿದ್ಧಾಂತ ಹಾಗೂ ಸಾಧನೆಗಳನ್ನು ಮನೆ ಮನೆಗೆ ಮುಟ್ಟಿಸುವ ಕಾರ್ಯ ನಿರಂತರವಾಗಿ ಮಾಡಬೇಕು ಎಂದು ಕರೆ ಮಾಡಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ಮಹೇಶ ಭಾತೆ,ಬಸಣ್ಣ ಅಸಂಗಿ ಇತರರು ಇದ್ದರು.
Laxmi News 24×7