Breaking News

ನಾಗಾಲ್ಯಾಂಡ್ ಮೂಲದ ಯುವತಿ ಆತ್ಮಹತ್ಯೆ

Spread the love

ಚಿಕ್ಕಮಗಳೂರು: ನಾಗಾಲ್ಯಾಂಡ್  ಮೂಲದ ಯುವತಿಯೊಬ್ಬಳ ಶವ ಚಿಕ್ಕಮಗಳೂರಿನ   ಅರವಿಂದ ನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತ ಯುವತಿಯನ್ನು ಲಿನ್ಸುಲಾ (22) ಎಂದು ಗುರುತಿಸಲಾಗಿದೆ. ಯುವತಿ ರೆಸಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಎರಡು ದಿನದ ಹಿಂದೆ ಕಿವಿಶೆ ಕಿನಿಮಿ ಎಂಬವರ ಜೊತೆ ಅರ್ಧ ಗಂಟೆ ಮಾತನಾಡಿದ್ದಳು ಎಂದು ತಿಳಿದು ಬಂದಿದೆ. ಯುವತಿ ಸಾವಿಗೂ ಮುನ್ನ ರಾಜೇಶ್ ಹಾಗೂ ತೇಜಸ್ ಎಂಬವರ ಹೆಸರನ್ನು ಡೈರಿಯಲ್ಲಿ ಬರೆದಿಟ್ಟಿದ್ದಾಳೆ.

ಲಿನ್ಸುಲಾಳಿಗೆ ರಾಜೇಶ್ ಹಾಗೂ ತೇಜಸ್ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದರು ಎಂದು ಲಶಿಲಾ ಇಂಚುಗರ್ ಎಂಬವರು ಬಸವನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬಸವನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಶಾಲೆ ಬಿಸಿಯೂಟಕ್ಕೂ ತಟ್ಟಿದ ಗ್ಯಾಸ್‌ ಅಭಾವದ ಬಿಸಿ – ಸೌದೆ ಒಲೆಯಲ್ಲೇ ಅಡುಗೆ ಮಾಡಿದ ಸಿಬ್ಬಂದಿ

Spread the loveಚಿಕ್ಕಮಗಳೂರು: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷದಿಂದ ಉಂಟಾದ ಗ್ಯಾಸ್ ಅಭಾವ  ಶಾಲೆಗಳ ಬಿಸಿಯೂಟ ಯೋಜನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ