Breaking News

ಅಂಕಲಗಿ ಘಟಕ ಹೋಮ್‌ಗಾರ್ಡಗೆ ಮುಖ್ಯಮಂತ್ರಿಗಳ ಸೇವಾ ಪದಕ ಶಾಸಕರಿಂದ ಸತ್ಕಾರ

Spread the love

ಗೋಕಾಕ: ತಾಲೂಕಿನ ಅಂಕಲಗಿ ಘಟಕ ಹೋಮ್‌ಗಾರ್ಡ ಆಗಿರುವ ಹೊಳೆಪ್ಪಾ ಬಸವಣ್ಣಿ ನೇಸರಗಿ ಅವರಿಗೆ ೨೦೨೫ರ ಮುಖ್ಯಮಂತ್ರಿಗಳ ಸೇವಾ ಪದಕ ದೊರೆತಿರುವುದಕ್ಕಾಗಿ ಶಾಸಕ ರಮೇಶ ಜಾರಕಿಹೊಳಿ ಅವರು ನಗರದ ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು.
ಹೊಳೆಪ್ಪಾ ನೇಸರಗಿ ಅವರ ಸಮರ್ಪಣಾ ಮನೋಭಾವವನ್ನು ಗುರುತಿಸುವುದು ಮತ್ತು ಪ್ರೋತ್ಸಾಹಿಸುವುದು. ದೀರ್ಘಕಾಲದ ಸೇವೆ ಬಂದೋಬಸ್ತ್ ಕರ್ತವ್ಯ, ತುರ್ತು ಸಂದರ್ಭಗಳಲ್ಲಿ ಅಗ್ನಿ ಸುರಕ್ಷತೆ, ಮತ್ತು ಶೌರ್ಯ ಪ್ರದರ್ಶಿಸಿದ ಕಾರಣ ಸಿಎಂ ಪದಕ ಲಭಿಸಿದ್ದು ಇಂಥಹ ಸಿಬ್ಬಂದಿಗಳಿಗೆ ಪ್ರಶಸ್ತಿಗಳು ಮತ್ತಷ್ಟು ಪುಷ್ಟಿ ನೀಡುತ್ತವೆ ಎಂದು ಶಾಸಕರು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕರಾದ ಭೀಮನಗೌಡ ಪೊಲೀಸ್ ಗೌಡರ, ಮುಖಂಡರಾದ ಲಕ್ಷö್ಮಣ ಜಡಗಿ, ಲಕ್ಕಪ್ಪ ತಳವಾರ, ಈರಪ್ಪ ನೇಸರಗಿ, ಶಾಂತು ಕೂಡಜೋಗಿ, ಸಂತೋಷ್ ಪೂಜಾರಿ, ಮಾರುತಿ ಬಾಗಡಿ, ಬಸವರಾಜ್ ಕುರುಪಿ ಸೇರಿದಂತೆ ಅನೇಕರು ಇದ್ದರು.


Spread the love

About Laxminews 24x7

Check Also

ಸಾವಳಗಿಯಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಅದ್ದೂರಿ – ಅಡ್ಡ ಪಲ್ಲಕ್ಕಿ ಉತ್ಸವಕ್ಕೆ ಭಕ್ತರ ಅಪಾರ ಸ್ಪಂದನೆ

Spread the loveಗೋಕಾಕ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಅಡ್ಡ ಪಲ್ಲಕ್ಕಿ ಉತ್ಸವದಲ್ಲಿ ಶೂನ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ