ಬೆಳಗಾವಿ : ರಾಜ್ಯ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಕರ್ನಾಟಕ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ನೀತಿ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬುಧವಾರ ಪಾಲುದಾರರೊಂದಿಗೆ ಸಮಾಲೋಚನೆ ನಡೆಯಿತು.
ಜಿಲ್ಲಾ ಕೈಗಾರಿಕೆ ಕೇಂದ್ರ ಹಾಗೂ ಬೆಳಗಾವಿ ವಾಣಿಜ್ಯೋದ್ಯಮ ಸಂಘಗಳ ಸಹಯೋಗದಲ್ಲಿ ಫೌಂಡ್ರಿ ಕ್ಲಸ್ಟರ್ ಸಭಾಂಗಣದಲ್ಲಿ ನಡೆದ ವಿಭಾಗಮಟ್ಟದ ಸಮಾವೇಶದಲ್ಲಿ ವಿವಿಧ ತಜ್ಞರು ವಿಷಯಗಳನ್ನು ಮಂಡಿಸಿದರು.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನಿರ್ದೇಶಕ ಡಾ.ಸತೀಶ ಬಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಎಲ್ಲ ಕಡೆ ಪಾಲುದಾರರ ಸಮಾವೇಶ ನಡೆಸಿ, ಸಲಹೆ ಪಡೆದು ಸರಕಾರಕ್ಕೆ ವರದಿ ಸಲ್ಲಿಸಲಾಗುವುದು.
ಚರ್ಚೆಯ ನಂತರ ಸರಕಾರ ನೂತನ ಪಾಲಿಸಿ ಜಾರಿಗೆ ತರಲಿದೆ ಎಂದರು. ಬೆಳಗಾವಿ ವಿಭಾಗದ ವಿವಿಧ ಜಿಲ್ಲೆಗಳಿಂದ ಕೈಗಾರಿಕೊದ್ಯಮಿಗಳು ಆಗಮಿಸಿದ್ದರು.
ಹುಬ್ಬಳ್ಳಿಯ ಎಂಎಸ್ಎಂಇ ಜೆಡಿ ಸತೀಶ್ ಕುಮಾರ, ಫೌಂಡ್ರಿ ಕ್ಲಸ್ಟರ್ ಚೇರಮನ್ ರಾಮ ಭಂಡಾರೆ, ಬೆಳಗಾವಿ ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ಪ್ರಭಾಕರ ನಾಗರಮುನೋಳಿ, ಹುಬ್ಬಳ್ಳಿ ವಾಣಿಜ್ಯೋದ್ಯಮ ಸಂಘದ ಉಪಾಧ್ಯಕ್ಷ ಪ್ರವೀಣ ಅಗಡಿ, ವಿಜಯಪುರ ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ಪೀಟರ್ ಅಲೆಕ್ಸಾಂಡರ್, ಲಘು ಉದ್ಯೋಗ ಭಾರತಿ ರಾಷ್ಟ್ರೀಯ ಉಪಾಧ್ಯಕ್ಷ ಸಚಿನ್ ಸಬ್ನಿಸ್, ಬೆಳಗಾವಿ ಕಾರ್ಯದರ್ಶಿ ಪ್ರಶಾಂತ ಪಾಟೀಲ, ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಸತ್ಯನಾರಾಯಣ ಭಟ್ ಮೊದಲಾದವರು ಭಾಗವಹಿಸಿದ್ದರು.
Laxmi News 24×7