Breaking News

1ನೇ ತರಗತಿ ಪ್ರವೇಶ | 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳ ವಿನಾಯಿತಿ

Spread the love

ಬೆಂಗಳೂರು: ಒಂದನೇ ತರಗತಿ ದಾಖಲಾತಿಗೆ ಆರು ವರ್ಷ (6 Years) ತುಂಬಿರಬೇಕೆಂಬ ಕಡ್ಡಾಯ ನಿಯಮದಲ್ಲಿ ಸರ್ಕಾರ ಈ ವರ್ಷವೂ 60 ದಿನಗಳ ವಿನಾಯಿತಿ ನೀಡಿ ಮಹತ್ವದ ತೀರ್ಮಾನ ಕೈಗೊಂಡಿದೆ.

ವಿಧಾನಸಭೆಯಲ್ಲಿಂದು ಈ ಸಂಬಂಧ ಶಿಕ್ಷಣ ಸಚಿವ ಮಧು ಬಂಗಾರಪ್ಪ  ಮಹತ್ವದ ಘೋಷಣೆ ಮಾಡಿದರು. ಒಂದನೇ ತರಗತಿಗೆ ದಾಖಲಾಗಲು ಆರು ವರ್ಷ ತುಂಬಿರಬೇಕೆಂಬ ನಿಯಮದಲ್ಲಿ 2026-27 ನೇ ವರ್ಷದ ಶೈಕ್ಷಣಿಕ ವರ್ಷದಲ್ಲಿ 60 ದಿನಗಳ ಸಡಿಲಿಕೆ ಕೊಡುವ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

ಈ ನಿರ್ಧಾರದಿಂದ 5 ವರ್ಷ 10 ತಿಂಗಳು ಅಥವಾ ಅದರ ಮೇಲೆ ವಯಸ್ಸಾಗಿರುವ ಮಕ್ಕಳೂ ಸಹ ಈ ವರ್ಷ ಒಂದನೇ ತರಗತಿಗೆ ದಾಖಲಾಗಬಹುದು. ಈ ಸಡಿಲಿಕೆ ಎಲ್‌ಕೆಜಿ, ಯುಕೆಜಿ, ಒಂದನೇ ತರಗತಿಗೆ ಅನ್ವಯವಾಗಲಿದೆ.

ಮಕ್ಕಳ ಪೋಷಕರು ವಯೋಮಿತಿ ಸಡಿಲಿಕೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದರು. ಸಿಎಂ, ಡಿಸಿಎಂ, ಶಿಕ್ಷಣ ಸಚಿವರ ಮನೆಗಳಿಗೆ ಪದೇಪದೇ ಹೋಗಿ ಒತ್ತಾಯ ಮಾಡುತ್ತಿದ್ದರು. ಈಗ ಸರ್ಕಾರದ ನಿರ್ಧಾರದಿಂದ ಈ ಮಕ್ಕಳ ಪೋಷಕರು ನಿಟ್ಟುಸಿರು ಬಿಡುವಂತಾಗಿದೆ.

ಪ್ರತೀ ಬಾರಿಯೂ ಈ ಸಮಸ್ಯೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಹೊಸದಾಗಿ ಕಾನೂನು ತಂದು ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರ ನಿರ್ಧರಿಸಿದೆ. ಇದುವರೆಗೆ ಎಲ್‌ಕೆಜಿ, ಯುಕೆಜಿಗೆ ರೆಗ್ಯುಲೇಟರಿ ನಿಯಮ ಇರಲಿಲ್ಲ. ಇದಕ್ಕಾಗಿ ಹೊಸ ಕಾನೂನು ತಂದು ಎಲ್‌ಕೆಜಿ, ಯುಕೆಜಿಯಲ್ಲೇ ದಾಖಲಾತಿಗೆ ವಯೋಮಿತಿ ನಿಗದಿ ಮಾಡಿ ಸ್ಪಷ್ಟತೆ ಕೊಡಲಾಗುವುದು. ಮುಂದಿನ ಅಧಿವೇಶನದಲ್ಲಿ ಈ ಸಂಬಂಧ ಮಸೂದೆ ಮಂಡನೆ ಮಾಡಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.


Spread the love

About Laxminews 24x7

Check Also

ಪೆಟ್ರೋಲ್, ಡೀಸೆಲ್ ಕೊರತೆ – ಸುಳ್ಳು ವದಂತಿಗಳಿಗೆ ಕಿವಿಗೊಡದಂತೆ ಮನವಿ

Spread the loveಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯಾಗಿದೆ ಎಂಬ ಸುಳ್ಳು ವದಂತಿಗಳು ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ