ಬೆಳಗಾವಿ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ಗಣೇಶಪುರ ಲಕ್ಷ್ಮೀ ನಗರದ ಸಚಿನ ಕಾಕತ್ಕರ್ (30)ಗೆ ಇಲ್ಲಿನ ಪೋಕ್ಸೋ ನ್ಯಾಯಾಲಯ ಮೂರು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದೆ.
ಸಚಿನ, 2022ರ ಮಾ.8ರಂದು ಬಾಲಕಿ ಎದುರು ಗುಪ್ತಾಂಗ ಪ್ರದರ್ಶಿಸಿ ಅಶ್ಲೀಲವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಪ್ರಕರಣದ ವಿಚಾರಣೆ ನಡೆಸಿ, ಮೂರು ವರ್ಷ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಬುಧವಾರ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.
Laxmi News 24×7