Breaking News

ಈ ಬಾರಿ 50 ಸಾವಿರ ಅಂತರ ಖಚಿತ’ – ಕಾರಜೋಳ ಹೇಳಿಕೆ

Spread the love

ಬಾಗಲಕೋಟೆ: ಕಳೆದ ಮೂರು ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸವಾಗಿಲ್ಲ. ಈ ಬಾರಿ ಉಪಚುಣಾವನೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 50 ಸಾವಿರ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.
ಉಪಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಪ್ರಚಾರ ಜೋರಾಗಿದ್ದು, ಅವರು 15–16ನೇ ವಾರ್ಡ್‍ಗಳಲ್ಲಿ ಬಿಜೆಪಿ ಅಭ್ಯರ್ಥಿ ಡಾ. ವೀರಣ್ಣ ಚರಂತಿಮಠ ಪರ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಈ ವೇಳೆ ಮಾತನಾಡಿ ಕಾಂಗ್ರೆಸ್ ಆಡಳಿತದಲ್ಲಿ ಒಂದೇ ಒಂದು ಗಮನಾರ್ಹ ಅಭಿವೃದ್ಧಿ ಕಾರ್ಯಗಳಾಗದೆ ಜನರು ರೋಸಿ ಹೋಗಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. 2023ರ ಚುನಾವಣೆಯಲ್ಲಿ ವೀರಣ್ಣ ಚರಂತಿಮಠ ಅವರಿಗೆ ಮತ ನೀಡದೆ ತಪ್ಪು ಮಾಡಿಕೊಂಡಿದ್ದೇವೆ ಎಂದು ಜನರು ಹೇಳುತ್ತಿದ್ದು. ಈ ಚುನಾವಣೆಯಲ್ಲಿ ಭಾರಿ ಅಂತರದಲ್ಲಿ ಗೆಲ್ಲಿಸುವ ನಿರ್ಧಾರ ಮಾಡಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಭ್ರμÁ್ಟಚಾರ ಮತ್ತು ಸ್ವಜನಪಕ್ಷಪಾತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ದಲಿತರಿಗಾಗಿ ಮೀಸಲಾದ ಅನುದಾನ ದುರುಪಯೋಗ ಮಾಡಿಕೊಂಡಿದ್ದು ಅವರಿಗೆ ಮತದಾರರು ತಕ್ಕಪಾಠ ಕಲಿಸಲಿದ್ದಾರೆ ಎಂದು ವಾಗ್ದಾಳಿ ಮಾಡಿದರು.
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಡಾ. ದೇವರಾಜ ಪಾಟೀಲ, ಅಯ್ಯಪ್ಪ ವಾಲ್ಮೀಕಿ, ಸಲಿಂ ಮೋಮಿನ್, ನರಸಪ್ಪಾ ಅಂಬಿಗೇರ, ದುರಗಪ್ಪ ನಾಯಕ್, ಹಣಮಂತ ಬಿಚ್ಚಲಿ, ಪರಶು ಕುರಬರ, ನಾಗರಾಜ ಕಟ್ಟಿಮನಿ, ರಾಜು ಕೋಟೆಕಲ್ಲ, ಬಸವರಾಜ ಅಂಬಿಗೇರ, ಮಲ್ಲಿಕಾರ್ಜುನ ಸುರಪೂರ, ಶೀವು ಸುರಪೂರ, ಅನಿತಾ ಸರೋದೆ, ಭಾಗ್ಯಾ ಉದ್ದನೂರ, ಶಶಿಕಲಾ ಮಜ್ಜಗಿ, ಕುಮಾರ ಪವಾರ್, ಮಂಜು ಚವ್ಹಾನ್, ಜ್ಯೋತಿ ಸೇರಿದಂತೆ ಹಲವರು ಪ್ರಚಾರದಲ್ಲಿ ಭಾಗವಹಿಸಿದರು.
ಪೋಟೋ 01-02- ಗೋವಿಂದ ಕಾರಜೋಳ ಹಾಗೂ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ನಗರದಲ್ಲಿ ಮತಯಾಚನೆ ಮಾಡಿದರು.


Spread the love

About Laxminews 24x7

Check Also

ಸ್ಮಾರಕಗಳು ಇತಿಹಾಸದ ಮೂಲ : ಹೊಸಕೇರಿ

Spread the loveಬಾಗಲಕೋಟೆ : ಇತಿಹಾಸದ ಘಟನೆಗಳನ್ನು ಸ್ಮರಿಸುವುದು ಮುಖ್ಯ . ರಾಜರು ಸ್ಮರಣೆಗಾಗಿ ಕಟ್ಟಿದ ಸ್ಮಾರಕಗಳನ್ನು ರಕ್ಷಿಸುವುದು ನಮ್ಮೆಲ್ಲರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ