Breaking News

ಸಮಾಜವಾದಿ ಸರ್ಕಾರದಲ್ಲಿ ವಿಐಪಿ ಸಂಸ್ಕೃತಿ – ತನಗೆ ಐಪಿಎಲ್‌ ಟಿಕೆಟ್‌ ಬೇಡ ಎಂದ ಸುರೇಶ್‌ ಕುಮಾರ್‌

Spread the love

ಬೆಂಗಳೂರು: ಐಪಿಎಲ್ ( ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್  ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌  ಸ್ಪೀಕರ್‌ ಯುಟಿ ಖಾದರ್‌ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಸಮಾಜವಾದಿ ಎಂದು ಹೇಳಿಕೊಳ್ಳುವ ಸರ್ಕಾರದ ಆಡಳಿತದಲ್ಲಿ ಈ ವಿಐಪಿ ಸಂಸ್ಕೃತಿಗೆ ಪುರಸ್ಕಾರ ಸಿಗುತ್ತಿರುವುದು ಆಘಾತಕಾರಿಯಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಮಾ.26 ರಂದು ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ  ವ್ಯಾಪ್ತಿಯಲ್ಲಿ ಜನಸಾಮಾನ್ಯರು ಅನುಭವಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿದ್ದಾಗ ದಿಢೀರನೆ ಚಿನ್ನಸ್ವಾಮಿ ಸ್ಟೇಡಿಯಂನ  ಐಪಿಎಲ್ ಪಂದ್ಯ, ಶಾಸಕರಿಗೆ ಟಿಕೆಟ್ ಹಂಚಿಕೆ ಹಾಗೂ ಶಾಸಕರ ಮರ್ಯಾದೆಯ ಕುರಿತು ಚರ್ಚೆಗಳು ಪ್ರಾರಂಭವಾದದ್ದು ತಮಗೆ ತಿಳಿದೇ ಇದೆ.

ಜನಸಾಮಾನ್ಯರ ಅದೆಷ್ಟೋ ಗಂಭೀರ ಪ್ರಶ್ನೆಗಳಿಗೆ, ಸಮಸ್ಯೆಗಳಿಗೆ ವರ್ಷಾನುಗಟ್ಟಲೆ ಪರಿಹಾರ ಸಿಗುವುದಿಲ್ಲ. ಆದರೆ ಶಾಸಕರ ಸೌಲಭ್ಯ, ಟಿಕೆಟ್ ವಿಚಾರ ಬಂದಾಗ 24 ಗಂಟೆಯೊಳಗೆ ಸ್ಪಂದಿಸುವ ಉತ್ಸುಕತೆಯನ್ನು ಸರ್ಕಾರ ತೋರಿರುವುದು ಜನಸಾಮಾನ್ಯರಲ್ಲಿ ಆಶ್ಚರ್ಯ ಹಾಗೂ ಜನಪ್ರತಿನಿಧಿಗಳ ಬಗ್ಗೆ ತಿರಸ್ಕಾರ ಮೂಡುವಂತೆ ಮಾಡಿದೆ.

ಮಾಧ್ಯಮಗಳ ವರದಿ ಪ್ರಕಾರ ಶಾಸಕರಿಗೆ ತಲಾ ಎರಡು ಹಾಗೂ ಮುಂದಿನ ದಿನಗಳಲ್ಲಿ ಐದು ಟಿಕೆಟ್/ಪಾಸ್ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಸಮಾಜವಾದಿ ಎಂದು ಹೇಳಿಕೊಳ್ಳುವ ಸರ್ಕಾರದ ಆಡಳಿತದಲ್ಲಿ ಈ ʼವಿಐಪಿ ಸಂಸ್ಕೃತಿ’ಗೆ ಪುರಸ್ಕಾರ ಸಿಗುತ್ತಿರುವುದು ಆಘಾತಕಾರಿಯಾಗಿದೆ.

ಕಳೆದ ವರ್ಷ ಇದೇ ಐಪಿಎಲ್ ಪಂದ್ಯದ ಸಂದರ್ಭದಲ್ಲಿ ನಡೆದ ದುರಂತದಲ್ಲಿ 11 ಜನ ಅಮಾಯಕರು ಪ್ರಾಣ ಕಳೆದುಕೊಂಡ ಘಟನೆಯ ಆಕ್ರಂದನ ಇಂದಿಗೂ ನನ್ನ ಕಿವಿಯಲ್ಲಿ ಮಾರ್ದನಿಸುತ್ತಿದೆ. ಆ ನೋವಿನ ನಡುವೆ ನಾವು ಐಪಿಎಲ್ ಟಿಕೆಟ್‌ಗಾಗಿ ಸದನದಲ್ಲಿ ಪಟ್ಟು ಹಿಡಿಯುವುದು ನಮ್ಮನ್ನು ಜನರ ದೃಷ್ಟಿಯಲ್ಲಿ ಇನ್ನಷ್ಟು ಕನಿಷ್ಠರನ್ನಾಗಿಸುತ್ತದೆ.

ಈ ಎಲ್ಲಾ ಹಿನ್ನೆಲೆಯಲ್ಲಿ ಹಾಗೂ ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ, ಸರ್ಕಾರ ಅಥವಾ ಕೆಎಸ್‌ಸಿಎ ವತಿಯಿಂದ ಶಾಸಕರಿಗೆ ನೀಡಲಾಗುವ ಐಪಿಎಲ್ ಪಂದ್ಯದ ಯಾವುದೇ ಪಾಸ್ ಅಥವಾ ಟಿಕೆಟ್‌ಗಳನ್ನು ನಾನು ಸವಿನಯವಾಗಿ ನಿರಾಕರಿಸುತ್ತಿದ್ದೇನೆ. ಆದ್ದರಿಂದ ದಯವಿಟ್ಟು ಮುಂಬರುವ ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್ ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ಈ ಮೂಲಕ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ.


Spread the love

About Laxminews 24x7

Check Also

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

Spread the loveಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ  ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ ( …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ