Breaking News

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

Spread the love

ಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ  ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ ( ಸಾವನ್ನಪ್ಪಿದ್ದಾರೆ.

ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ದಂಪತಿ ಹಾಗೂ ಅವರ 4 ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ.

ಪಲಮನೇರ್‌ನಿಂದ ಚಿತ್ತೂರಿಗೆ ಬರುತ್ತಿದ್ದ ಬಸ್ಸು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ನಿಂತಿತ್ತು. ಈ ವೇಳೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ದಂಪತಿ ಹಾಗೂ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲೇ ಮೃತದೇಹಗಳು ಸಿಲುಕಿಕೊಂಡಿದ್ದವು. ಚಾಲಕನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಪೊಲೀಸರು ಬೆಂಗಳೂರು ಮೂಲದ ದಂಪತಿಯ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಪ್ರಾಥಮಿಕ ಮೂಲಗಳ ಪ್ರಕಾರ, ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಬೆಂಗಳೂರಿನಲ್ಲಿ ವಾಸವಿದ್ದ ಕುಟುಂಬ ಇಂದು ಮಧ್ಯಾಹ್ನ 12 ಗಂಟೆಗೆ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಟಿಕೆಟ್‌ ಪಡೆದುಕೊಂಡಿತ್ತು. ಆದ್ರೆ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

ಅಪಘಾತದ ಬಳಿಕ ಬಸ್‌ನ ಹಿಂಭಾಗಕ್ಕೆ ಸಿಲುಕಿಕೊಂಡಿದ್ದ ಕಾರನ್ನು ಪೊಲೀಸರು ಜೆಸಿಬಿ ಮೂಲಕ ಹೊರತೆಗೆದಿದ್ದಾರೆ


Spread the love

About Laxminews 24x7

Check Also

ಸಮಾಜವಾದಿ ಸರ್ಕಾರದಲ್ಲಿ ವಿಐಪಿ ಸಂಸ್ಕೃತಿ – ತನಗೆ ಐಪಿಎಲ್‌ ಟಿಕೆಟ್‌ ಬೇಡ ಎಂದ ಸುರೇಶ್‌ ಕುಮಾರ್‌

Spread the loveಬೆಂಗಳೂರು: ಐಪಿಎಲ್ ( ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್  ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ರಾಜಾಜಿನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ