Breaking News

ಮೂಡಿಗೆರೆ, ಚಿಕ್ಕಮಗಳೂರಲ್ಲಿ ಭಾರೀ ಗಾಳಿ, ಮಳೆ – ವಾಹನ ಸವಾರರ ಪರದಾಟ

Spread the love

ಚಿಕ್ಕಮಗಳೂರು: ಮೂಡಿಗೆರೆ  ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಬಿಸಿಲಿನ ವಾತಾವರಣದ ನಡುವೆ ದಿಢೀರನೆ ಶುರುವಾದ ಮಳೆಯಿಂದ ವಾಹನ ಸವಾರರು ಪರದಾಡಿದ್ದಾರೆ.

ಚಿಕ್ಕಮಗಳೂರು  ನಗರದಲ್ಲೂ ಮಳೆ ಅಬ್ಬರಿಸುತ್ತಿದೆ. ಭಾರೀ ಗಾಳಿ ಜೊತೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಯಾವುದೇ ಮುನ್ಸೂಚನೆ ಇಲ್ಲದೇ ಆರಂಭವಾದ ಮಳೆಯಿಂದ ಜನ ಪರದಾಡುವಂತಾಗಿದೆ. ವಾಹನ ಸವಾರರು ವಾಹನ ಚಾಲನೆ ಮಾಡಲು ಸಾಧ್ಯವಾಗದೆ ಪರದಾಡಿದ್ದಾರೆ. ಬೈಕ್‌ ಸವಾರರು ಅಂಗಡಿಗಳು, ಬಸ್ ನಿಲ್ದಾಣಗಳ ಆಶ್ರಯ ಪಡೆದಿದ್ದಾರೆ. ಕೆಲವೆಡೆ ಗಾಳಿಯ ಅಬ್ಬರಕ್ಕೆ ಕಬ್ಬಿಣದ ತಗಡುಗಳು ಹಾರಿ ಹೋಗಿವೆ.

ಬಿಸಿಲ ಧಗೆಗೆ ಕಂಗೆಟ್ಟಿದ್ದ ರೈತರು ಮಾತ್ರ ಮಳೆ ಬಂದಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಕಾಫಿ ಗಿಡಗಳಿಗೆ ನೀರು ಹಾಯಿಸಲು ಪರದಾಡುತ್ತಿದ್ದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ.


Spread the love

About Laxminews 24x7

Check Also

ಸ್ನೇಹಿತನ ಮದುವೆಗೆ ಬಂದಿದ್ದ ಯುವಕ ಭದ್ರಾ ನದಿಯಲ್ಲಿ ಮುಳುಗಿ ಸಾವು

Spread the loveಚಿಕ್ಕಮಗಳೂರು: ಸ್ನೇಹಿತನ ಮದುವೆಗೆ ಬಂದಿದ್ದ ಯುವಕನೊಬ್ಬ ಭದ್ರಾ ನದಿಯಲ್ಲಿ  ಮುಳುಗಿ ಸಾವನ್ನಪ್ಪಿದ ಘಟನೆ ಎನ್.ಆರ್.ಪುರ  ತಾಲೂಕಿನ ಬನ್ನೂರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ