Breaking News

ಚುನಾವಣಾ ಪ್ರಚಾರದ ವೇಳೆ ಕೈ ಕೈ ಮಿಲಾಯಿಸಿಸಿದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು

Spread the love

ಬಾಗಲಕೋಟೆ: ಚುನಾವಣಾ ಪ್ರಚಾರ ರ‍್ಯಾಲಿಯಲ್ಲಿ ಎದುರು ಬದರಾದ ಕಾಂಗ್ರೆಸ್‌  ಹಾಗೂ ಬಿಜೆಪಿ  ಕಾರ್ಯಕರ್ತರು ಕೈ ಕೈ ಮಿಲಾಯಿಸಿದ ಘಟನೆ ಬಾಗಲಕೋಟೆಯ ಬೇವೂರು ಗ್ರಾಮದಲ್ಲಿ ನಡೆದಿದೆ.

ಕಾಂಗ್ರೆಸ್ ಪರ ಸಚಿವ ಆರ್.ಬಿ.ತಿಮ್ಮಾಪೂರ್ ಹಾಗೂ ಬಿಜೆಪಿ ಪರ ಬಿ.ಶ್ರೀರಾಮುಲು ಪ್ರಚಾರ ನಡೆಸುತ್ತಿದ್ದರು. ಆಗ ಎರಡೂ ಪಕ್ಷದ ಕಾರ್ಯಕರ್ತರು ಗ್ರಾಮದಲ್ಲಿ ಎದುರಾಗಿದ್ದಾರೆ. ಈ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಗೋ ಬ್ಯಾಕ್ ರಾಮುಲು ಎಂದು ಕೂಗಿದ್ದಾರೆ. ಇದರಿಂದ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದು, ನೂಕಾಟ ತಳ್ಳಾಟ ನಡೆದಿದೆ. ಅಲ್ಲದೇ ಕಾರ್ಯಕರ್ತರು ಕೈ ಕೈ ಮಿಲಾಯಿಸಿದ್ದಾರೆ.

ಚುನಾವಣಾ ಕಾವು ದಿನೇ ದಿನೇ ಹೆಚ್ಚುತ್ತಿದ್ದು, ಕ್ಷೇತ್ರದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಬೀಡು ಬಿಟ್ಟಿದ್ದಾರೆ.


Spread the love

About Laxminews 24x7

Check Also

ಬಸವೇಶ್ವರ ಪ.ಪೂ ವಾಣಿಜ್ಯ ಮಹಾವಿದ್ಯಾಲಯದ ಫಲಿತಾಂಶ : ಶೇ.88.10%

Spread the loveಬಾಗಲಕೋಟೆ: 2025-26ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿಯ ಫಲಿತಾಂಶ ಪ್ರಕಟವಾಗಿದ್ದು, ಮಹಾವಿದ್ಯಾಲಯದ ಕುಮಾರ ಮಂಥನ ಮಹಾವೀರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ