Breaking News

ಮಹಾವೀರ ಜಯಂತಿ ಮೆರವಣಿಗೆ – ಗಮನ ಸೆಳೆದ ಬುರುಡೆ ಕೇಸ್‌ ಟ್ಯಾಬ್ಲೋ

Spread the love

ಬೆಳಗಾವಿ: ಮಹಾವೀರ ಜಯಂತಿಯ ಮೆರವಣಿಗೆಯಲ್ಲಿ ಧರ್ಮಸ್ಥಳದ ಬುರುಡೆ ಪ್ರಕರಣದ ಗ್ಯಾಂಗ್ ) ಟ್ಯಾಬ್ಲೋ ಎಲ್ಲರ ಗಮನ ಸೆಳೆದಿದೆ.

ಸತ್ಯಕ್ಕೆ ಜಯ ಸುಳ್ಳಿಗೆ ಸೋಲು ಎನ್ನುವ ನ್ಯಾಯ ತಕ್ಕಡಿಯನ್ನು ಟ್ಯಾಬ್ಲೋ ಪ್ರದರ್ಶನ ಮಾಡಲಾಗಿದೆ. ತಕ್ಕಡಿಯಲ್ಲಿ ಒಂದು ಕಡೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಭಾವಚಿತ್ರವನ್ನು ಹಾಕಲಾಗಿದ್ದು, ಇನ್ನೊಂದು ಕಡೆ ಧರ್ಮಸ್ಥಳ ವಿರುದ್ಧ ಬುರುಡೆ ಕಥೆ ಕಟ್ಟಿದ್ದ ಆರೋಪಿ ಮುಸುಕುಧಾರಿ ಸೇರಿ ಮೂವರ ಭಾವಚಿತ್ರವನ್ನು ಪ್ರದರ್ಶಿಸಲಾಗಿತ್ತು.

ಬೆಳಗಾವಿ ನಗರದ ಜೈನ ಸಮುದಾಯದಿಂದ ಆಯೋಜಿಸಿದ್ದ ಮಹಾವೀರ ಜಯಂತಿಯಲ್ಲಿ ಬಿಜೆಪಿ ಶಾಸಕ ಅಭಯ ಪಾಟೀಲ್, ಮಾಜಿ ಶಾಸಕ ಸಂಜಯ ಪಾಟೀಲ್, ಮೇಯರ್, ಉಪ ಮೇಯರ್ ಭಾಗಿಯಾಗಿದ್ದರು. ಮಂಜುನಾಥ ಆಶೀರ್ವಾದದಿಂದ ಧರ್ಮಸ್ಥಳಕ್ಕೆ ಅಂಟಿದ್ದ ಕಳಂಕ ನಿವಾರಣೆಯಾಗಿದೆ ಎಂಬ ಸಂದೇಶವನ್ನು ಸಾರಲಾಯಿತು.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ