Breaking News

ಮನೆಗಳ ಕರ ಸುಲಾತಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕಾಗವಾಡ ತಾಲೂಕ ಪ್ರಥಮ ಸ್ಥಾನ.

Spread the love

ಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 15 ತಾಲೂಕಿನ ತಾಲೂಕಾ ಪಂಚಾಯಿತಿಗಳ ಪೈಕಿ ಕಾಗವಾಡ ತಾಲೂಕ ಪಂಚಾಯಿತಿ ವತಿಯಿಂದ ಗ್ರಾಮ ಪಂಚಾಯಿತಿಗಳ ಮುಖಾಂತರ ಮನೆಗಳ ಕರ ವಸುಲಾತಿಎಲ್ಲಿ ಶೇಕಡಾ 122 ರಷ್ಟು ಸಾಧನೆ ಮಾಡಿ ಜಿಲ್ಲೆಯಲ್ಲಿ ಪುನ ಪ್ರಥಮ ಕ್ರಮಾಂಕ ಪಡೆದು ಸಾಧನೆ ಮಾಡಿದೆ.

ಬೆಳಗಾವಿ ಜಿಲ್ಲೆಯ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಹಾಗೂ ಉಪ ಕಾರ್ಯದರ್ಶಿ ಬಸವರಾಜ ಅಡವಿಮಠ ಇವರ ಮಾರ್ಗದರ್ಶನದಲ್ಲಿ
ಕಾಗವಾಡ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣಾ ವಾಲಿ ಮತ್ತು ಸಹಾಯಕ ನಿರ್ದೇಶಕರಾದ ಎ ಡಿ. ಅನ್ಸಾರಿ ಇವರ ಸತತ ಪ್ರಯತ್ನದಿಂದ ಜಿಲ್ಲೆಯಲ್ಲಿ ಕಾಗವಾಡ ತಾಲೂಕ ಪ್ರಥಮ ಕ್ರಮಾಂಕ ಪಡೆದುಕೊಂಡಿದೆ.

ಕಾಗವಾಡ ತಾಲೂಕ ಪಂಚಾಯಿತಿ ವ್ಯಾಪ್ತಿಯಲ್ಲಿ 08 ಗ್ರಾಮ ಪಂಚಾಯಿತಿಗಳು ಇದ್ದು ಅದರಲ್ಲಿ 7 ಗ್ರಾಮ ಪಂಚಾಯಿತಿಗಳು 100%ರಷ್ಟು ಸಾಧನೆ ಮಾಡಿದ್ದಾರೆ.
ಕಾಗವಾಡ ತಾಲೂಕಿನ 8 ಗ್ರಾಮ ಪಂಚಾಯಿತಿಗಳ ವಾರ್ಷಿಕ ಬೇಡಿಕೆ 1.44 ಕೋಟಿ ರೂಪಾಯಿ ಇದ್ದು ಇದರಲ್ಲಿ 1.75 ಕೋಟಿ ರೂಪಾಯಿ ಮನೆಕರ ವಸೂಲಾತಿ ಮಾಡಿದ್ದಾರೆ.
8 ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ವರ್ಗ ಕರ ವಸುಲಾತಿಯಲ್ಲಿ ಸತತ ಪ್ರಯತ್ನ ಮಾಡಿ ಆದೇಶದ ಪಾಲನೆ ಮಾಡಿದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕರವಸುಲಾತಿಯಲ್ಲಿ ಪ್ರಥಮ ಸ್ಥಾನ ಪಡೆದುಕೊಳ್ಳಲು ಯಶಸ್ವಿಯಾಗಿದೆ.
ಅಧಿಕಾರಿಗಳ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿಶೇಷ ಸಾಧನೆಗೆ ಜಿಲ್ಲೆಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ