Breaking News

ಹುಕ್ಕೇರಿಯಲ್ಲಿ ಬೀದಿ ನಾಯಿಗಳ ರಕ್ಕಸ ದಾಳಿ: ರೈತ ಬಸವರಾಜ ಸ್ಥಿತಿ ಗಂಭೀರ, ಗ್ರಾ.ಪಂ ವಿರುದ್ಧ ಜನರ ಕಿಡಿ!

Spread the love

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ಬೀದಿ ನಾಯಿಗಳ ಕಾಟ ಮಿತಿಮೀರಿದ್ದು, ರೈತನೊಬ್ಬನ ಮೇಲೆ ಏಳೆಂಟು ನಾಯಿಗಳು ಭೀಕರವಾಗಿ ದಾಳಿ ಮಾಡಿವೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಗ್ರಾಮಸ್ಥರು ಈಗ ರಸ್ತೆಗೆ ಇಳಿಯಲೂ ಭಯಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

\ಹುಕ್ಕೇರಿ ತಾಲೂಕಿನ ಕುಲ್ಲೋಳಹಟ್ಟಿ ಗ್ರಾಮದಲ್ಲಿ ಮಂಗಳವಾರ ಭೀಕರ ಘಟನೆಯೊಂದು ಸಂಭವಿಸಿದೆ. ಎಂದಿನಂತೆ ಬೈಕ್ ಮೇಲೆ ಜಮೀನು ಕೆಲಸಕ್ಕೆ ಹೊರಟಿದ್ದ ಬಸವರಾಜ ಎಂಬುವವರ ಮೇಲೆ ಏಕಾಏಕಿ ಏಳೆಂಟು ಬೀದಿ ನಾಯಿಗಳು ಮುಗಿಬಿದ್ದಿವೆ. ನಾಯಿಗಳ ಹಿಂಡು ಬಸವರಾಜ ಅವರ ಕೈ, ಕಾಲು, ಮುಖ ಹಾಗೂ ಹಣೆಗೆ ಮನಬಂದಂತೆ ಕಚ್ಚಿ ತೀವ್ರವಾಗಿ ಗಾಯಗೊಳಿಸಿವೆ. ಪ್ರಸ್ತುತ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಬೈಟ್
ಕಳೆದ ಹದಿನೈದು ದಿನಗಳ ಹಿಂದೆಯಷ್ಟೇ ಇದೇ ಗ್ರಾಮದಲ್ಲಿ ನಾಲ್ಕು ವರ್ಷದ ಮಗುವಿನ ಮೇಲೆಯೂ ನಾಯಿಗಳು ದಾಳಿ ಮಾಡಿದ್ದವು ಎಂದು ಬಸವರಾಜ ಅವರ ಸಹೋದರಿ ಆತಂಕ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದಾರೆ. ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಭೀತಿಯನ್ನು ಹುಟ್ಟುಹಾಕಿದೆ. ಬೈಟ್
ಇನ್ನು ನಾಯಿಗಳ ಹಾವಳಿ ತಡೆಗಟ್ಟುವಂತೆ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಹಲವಾರು ಬಾರಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಂತ್ರಸ್ತನ ಸಹೋದರ ಆರೋಪಿಸಿದ್ದಾರೆ. “ಶೀಘ್ರದಲ್ಲೇ ಕ್ರಮ ಕೈಗೊಳ್ಳುತ್ತೇವೆ” ಎಂಬ ಭರವಸೆ ನೀಡುವ ಅಧಿಕಾರಿಗಳು, ಕಾರ್ಯರೂಪಕ್ಕೆ ಮುಂದಾಗುತ್ತಿಲ್ಲ. ಅಧಿಕಾರಿಗಳ ಈ ಉಡಾಫೆ ಧೋರಣೆಯೇ ಇಂದಿನ ಅನಾಹುತಕ್ಕೆ ಕಾರಣವಾಗಿದ್ದು, ಕೂಡಲೇ ನಾಯಿಗಳ ಹಾವಳಿಗೆ ಕಡಿವಾಣ ಹಾಕದಿದ್ದರೆ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ