Breaking News

ಬೆಳಗಾವಿ ಹಾಲು ಸಂಘಕ್ಕೆ 12.59 ಕೋಟಿ ರೂ. ಲಾಭ, ಬೆಳಗಾವಿಗೆ ಮೆಗಾ ಡೈರಿ: ಬೆಮುಲ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಬೆಳಗಾವಿ: ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘ (ಕೆಎಂಎಫ್) 2025-26 ಆರ್ಥಿಕ ವರ್ಷದಲ್ಲಿ 12 ಕೋಟಿ ರೂ. 59 ಲಕ್ಷ ನಿಕರಿ ಲಾಭ ಗಳಿಸಿದ್ದು, 510 ಕೋಟಿ ರೂ. ವಹಿವಾಟು ಸಾಧಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಮತ್ತು ಬೆಳಗಾವಿಗೆ ಮೆಗಾ ಡೈರಿ ನಿರ್ಮಾಣ ಮಾಡಲು ಈಗಾಗಲೇ ಒಂದು ಯೋಜನೆ ರೂಪಿಸಿದೆ ಎಂದು ಬೆಮುಲ್‌ ಅಧ್ಯಕ್ಷ, ಶಾಸಕಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.
ನಗರದ ಖಾಸಗಿ ಹೋಟೆಲ್‌ ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಈ ವರ್ಷ ಸಂಘದ ವಿಸ್ತರಣೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, 100 ಹೊಸ ಹಾಲು ಉತ್ಪಾದಕರ ಸಹಕಾರಿ ಸಂಘಗಳನ್ನು ಸ್ಥಾಪಿಸಲಾಗಿದೆ. ಇದರಿಂದ ಒಟ್ಟು ಕಾರ್ಯನಿರ್ವಹಣೆಯಲ್ಲಿರುವ ಸಂಘಗಳ ಸಂಖ್ಯೆ 685ಕ್ಕೆ ಏರಿಕೆಯಾಗಿದೆ ಎಂದರು.
ರಾಜ್ಯ ಸರ್ಕಾರದಿಂದ ಹಾಲು ಉತ್ಪಾದಕರಿಗೆ 32 ಕೋಟಿ ರೂ. ಪ್ರೋತ್ಸಾಹ ಧನ ವಿತರಣೆ ಮಾಡಲಾಗಿದೆ. ಇನ್ನೂ ಸುಮಾರು 7.50 ಕೋಟಿ ರೂ. ಬಾಕಿ ಉಳಿದಿದ್ದು, ಅದನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ಹೇಳಿದರು.
ಸಂಘವು ಹಾಲು ಸಂಗ್ರಹಣೆಯೊಂದಿಗೆ ತುಪ್ಪ, ಪನೀರ್ ಮತ್ತು ಪೇಡಾ ಉತ್ಪಾದನೆಯಲ್ಲಿ ಸಹ ಗಮನಾರ್ಹ ಬೆಳವಣಿಗೆ ಕಂಡಿದೆ. ಮಾರುಕಟ್ಟೆ ವಿಸ್ತರಣೆಗೆ ಬೆಳಗಾವಿ ಸೇರಿದಂತೆ ಗೋವಾ ಮತ್ತು ಪುಣೆ ನಗರಗಳಲ್ಲಿ ಒಟ್ಟು 55 ಫ್ರಾಂಚೈಸಿಗಳನ್ನು ಆರಂಭಿಸಲಾಗಿದೆ. ವಿದೇಶಿಗೆ ಹಾಲು ವಿಸ್ತರಣೆ ಯಾವುದೇ ಸಮಸ್ಯೆ ಇಲ್ಲ, ಹಾಲನ್ನು ಡೈರಿಯಲ್ಲಿ ಶುದ್ಧಿಕರಿಸಲು ಯಾವುದೇ ರೀತಿ ಸಿಲಿಂಡರ ಕೊರತೆಯೂ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಹಾಲು ಸಂಗ್ರಹಣೆಯಲ್ಲಿಯೂ ಗಮನಾರ್ಹ ಪ್ರಗತಿ ಕಂಡುಬಂದಿದ್ದು, ಪ್ರತಿದಿನ ಸರಾಸರಿ 2.50 ಲಕ್ಷ ಕಿಲೋ ಹಾಲು ಸಂಗ್ರಹಿಸಲಾಗುತ್ತಿದೆ. ವರ್ಷಪೂರ್ತಿ ಒಟ್ಟು 8.20 ಕೋಟಿ ಕಿಲೋ ಹಾಲು ಸಂಗ್ರಹವಾಗಿದ್ದು, ಇದರಲ್ಲಿ ಹಸುವಿನ ಹಾಲಿನ ಪ್ರಮಾಣವೇ ಹೆಚ್ಚು ಇದೆ ಎಂದು ಮಾಹಿತಿ ನೀಡಿದರು.
ವಿಶೇಷವಾಗಿ ಆಂಧ್ರ ಪ್ರದೇಶದ ‘ಅಕ್ಷರ ದಾಸೋಹ’ ಯೋಜನೆಯಡಿಯಲ್ಲಿ ಶಾಲಾ ಮಕ್ಕಳಿಗೆ ದಿನಕ್ಕೆ 25 ಸಾವಿರ ಲೀಟರ್ ಹಾಲು ಸರಬರಾಜು ಮಾಡಲಾಗುತ್ತಿದೆ ಎಂಬುದು ಸಂಘದ ಮತ್ತೊಂದು ಸಾಧನೆ ಎಂದು ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅಧ್ಯಕ್ಷರು, ರಾಯಭಾಗದಲ್ಲಿ ಡೈರಿಗೆ ಉತ್ತಮ ರೈತರಿಂದ ಈಗಾಗಲೇ ಸ್ಪಂದನೆ ದೊರತ್ತಿದೆ. ಅದೇ ರೀತಿ ಮೆಗಾ ಡೈರಿ ಗುರಿಯನ್ನು ಹೊಂದಲಾಗಿದೆ. ಆರ್ಥಿಕ ವ್ಯವಹಾರಗಳ ಕುರಿತು ಮಾಹಿತಿ ನೀಡಿದ ಅವರು, ಸಂಘವು ರೈತರಿಗೆ 331 ರೂ. ಕೋಟಿ ಪಾವತಿಸಿದೆ. ಜೊತೆಗೆ ಲಾಭದ ಹಂಚಿಕೆಯಾಗಿ ಮೇವು ಕಟರ್, ರಬ್ಬರ್ ಮ್ಯಾಟ್ ಮತ್ತು ಹಾಲು ಹೀರುವ ಯಂತ್ರಗಳಿಗೆ ಸುಮಾರು 7 ಕೋಟಿ ರೂ. ಸಹಾಯ ನೀಡಲಾಗಿದೆ.
ಸಂಘದ ಈ ಪ್ರಗತಿ ರೈತರ ಹಿತಾಸಕ್ತಿಗೆ ಸಮರ್ಪಿತವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಸಾಧಿಸುವತ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಹೈನುಗಾರಿಕೆ ರೈತರು ಹೆಚ್ಚಿನ ಒತ್ತು ನೀಡಿ: ದಕ್ಷಿಣ ಬಾಗದಲ್ಲಿ ಹಾಲಿನ ಉತ್ಪಾದನೆ ಬೃಹತ್‌ ಉದ್ಯೋಗವಾಗಿದೆ. ಅದೇ ರೀತಿ ಉತ್ತರ ಕರ್ನಾಟಕ ರೈತರು ಹೈನುಗಾರಿಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಮುಂದಿನ ದಿನಗಳಲ್ಲಿ ರೈತರು ಹೆಚ್ಚಿನ ಹಾಲು ಉತ್ಪಾದಿಸುವ ಗುರಿಯನ್ನು ಹೊಂದಬೇಕು. ಕಬ್ಬಿನ ಬೆಳೆಗಳ ಆದಾಯ ಜೊತೆ ಹೈನುಗಾರಿಕೆ ಒಳ್ಳೆಯ ಆದಾಯವಿದೆ ಎಂದು ಹೇಳಿದರು.ಬೆಳಗಾವಿ ಹಾಲು ಸಂಘಕ್ಕೆ 12.59 ಕೋಟಿ ರೂ. ಲಾಭ, ಬೆಳಗಾವಿಗೆ ಮೆಗಾ ಡೈರಿ: ಬೆಮುಲ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘ (ಕೆಎಂಎಫ್) 2025-26 ಆರ್ಥಿಕ ವರ್ಷದಲ್ಲಿ 12 ಕೋಟಿ ರೂ. 59 ಲಕ್ಷ ನಿಕರಿ ಲಾಭ ಗಳಿಸಿದ್ದು, 510 ಕೋಟಿ ರೂ. ವಹಿವಾಟು ಸಾಧಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಮತ್ತು ಬೆಳಗಾವಿಗೆ ಮೆಗಾ ಡೈರಿ ನಿರ್ಮಾಣ ಮಾಡಲು ಈಗಾಗಲೇ ಒಂದು ಯೋಜನೆ ರೂಪಿಸಿದೆ ಎಂದು ಬೆಮುಲ್‌ ಅಧ್ಯಕ್ಷ, ಶಾಸಕಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.
ನಗರದ ಖಾಸಗಿ ಹೋಟೆಲ್‌ ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಈ ವರ್ಷ ಸಂಘದ ವಿಸ್ತರಣೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, 100 ಹೊಸ ಹಾಲು ಉತ್ಪಾದಕರ ಸಹಕಾರಿ ಸಂಘಗಳನ್ನು ಸ್ಥಾಪಿಸಲಾಗಿದೆ. ಇದರಿಂದ ಒಟ್ಟು ಕಾರ್ಯನಿರ್ವಹಣೆಯಲ್ಲಿರುವ ಸಂಘಗಳ ಸಂಖ್ಯೆ 685ಕ್ಕೆ ಏರಿಕೆಯಾಗಿದೆ ಎಂದರು.
ರಾಜ್ಯ ಸರ್ಕಾರದಿಂದ ಹಾಲು ಉತ್ಪಾದಕರಿಗೆ 32 ಕೋಟಿ ರೂ. ಪ್ರೋತ್ಸಾಹ ಧನ ವಿತರಣೆ ಮಾಡಲಾಗಿದೆ. ಇನ್ನೂ ಸುಮಾರು 7.50 ಕೋಟಿ ರೂ. ಬಾಕಿ ಉಳಿದಿದ್ದು, ಅದನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ಹೇಳಿದರು.
ಸಂಘವು ಹಾಲು ಸಂಗ್ರಹಣೆಯೊಂದಿಗೆ ತುಪ್ಪ, ಪನೀರ್ ಮತ್ತು ಪೇಡಾ ಉತ್ಪಾದನೆಯಲ್ಲಿ ಸಹ ಗಮನಾರ್ಹ ಬೆಳವಣಿಗೆ ಕಂಡಿದೆ. ಮಾರುಕಟ್ಟೆ ವಿಸ್ತರಣೆಗೆ ಬೆಳಗಾವಿ ಸೇರಿದಂತೆ ಗೋವಾ ಮತ್ತು ಪುಣೆ ನಗರಗಳಲ್ಲಿ ಒಟ್ಟು 55 ಫ್ರಾಂಚೈಸಿಗಳನ್ನು ಆರಂಭಿಸಲಾಗಿದೆ. ವಿದೇಶಿಗೆ ಹಾಲು ವಿಸ್ತರಣೆ ಯಾವುದೇ ಸಮಸ್ಯೆ ಇಲ್ಲ, ಹಾಲನ್ನು ಡೈರಿಯಲ್ಲಿ ಶುದ್ಧಿಕರಿಸಲು ಯಾವುದೇ ರೀತಿ ಸಿಲಿಂಡರ ಕೊರತೆಯೂ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಹಾಲು ಸಂಗ್ರಹಣೆಯಲ್ಲಿಯೂ ಗಮನಾರ್ಹ ಪ್ರಗತಿ ಕಂಡುಬಂದಿದ್ದು, ಪ್ರತಿದಿನ ಸರಾಸರಿ 2.50 ಲಕ್ಷ ಕಿಲೋ ಹಾಲು ಸಂಗ್ರಹಿಸಲಾಗುತ್ತಿದೆ. ವರ್ಷಪೂರ್ತಿ ಒಟ್ಟು 8.20 ಕೋಟಿ ಕಿಲೋ ಹಾಲು ಸಂಗ್ರಹವಾಗಿದ್ದು, ಇದರಲ್ಲಿ ಹಸುವಿನ ಹಾಲಿನ ಪ್ರಮಾಣವೇ ಹೆಚ್ಚು ಇದೆ ಎಂದು ಮಾಹಿತಿ ನೀಡಿದರು.
ವಿಶೇಷವಾಗಿ ಆಂಧ್ರ ಪ್ರದೇಶದ ‘ಅಕ್ಷರ ದಾಸೋಹ’ ಯೋಜನೆಯಡಿಯಲ್ಲಿ ಶಾಲಾ ಮಕ್ಕಳಿಗೆ ದಿನಕ್ಕೆ 25 ಸಾವಿರ ಲೀಟರ್ ಹಾಲು ಸರಬರಾಜು ಮಾಡಲಾಗುತ್ತಿದೆ ಎಂಬುದು ಸಂಘದ ಮತ್ತೊಂದು ಸಾಧನೆ ಎಂದು ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅಧ್ಯಕ್ಷರು, ರಾಯಭಾಗದಲ್ಲಿ ಡೈರಿಗೆ ಉತ್ತಮ ರೈತರಿಂದ ಈಗಾಗಲೇ ಸ್ಪಂದನೆ ದೊರತ್ತಿದೆ. ಅದೇ ರೀತಿ ಮೆಗಾ ಡೈರಿ ಗುರಿಯನ್ನು ಹೊಂದಲಾಗಿದೆ. ಆರ್ಥಿಕ ವ್ಯವಹಾರಗಳ ಕುರಿತು ಮಾಹಿತಿ ನೀಡಿದ ಅವರು, ಸಂಘವು ರೈತರಿಗೆ 331 ರೂ. ಕೋಟಿ ಪಾವತಿಸಿದೆ. ಜೊತೆಗೆ ಲಾಭದ ಹಂಚಿಕೆಯಾಗಿ ಮೇವು ಕಟರ್, ರಬ್ಬರ್ ಮ್ಯಾಟ್ ಮತ್ತು ಹಾಲು ಹೀರುವ ಯಂತ್ರಗಳಿಗೆ ಸುಮಾರು 7 ಕೋಟಿ ರೂ. ಸಹಾಯ ನೀಡಲಾಗಿದೆ.
ಸಂಘದ ಈ ಪ್ರಗತಿ ರೈತರ ಹಿತಾಸಕ್ತಿಗೆ ಸಮರ್ಪಿತವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಸಾಧಿಸುವತ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಹೈನುಗಾರಿಕೆ ರೈತರು ಹೆಚ್ಚಿನ ಒತ್ತು ನೀಡಿ: ದಕ್ಷಿಣ ಬಾಗದಲ್ಲಿ ಹಾಲಿನ ಉತ್ಪಾದನೆ ಬೃಹತ್‌ ಉದ್ಯೋಗವಾಗಿದೆ. ಅದೇ ರೀತಿ ಉತ್ತರ ಕರ್ನಾಟಕ ರೈತರು ಹೈನುಗಾರಿಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಮುಂದಿನ ದಿನಗಳಲ್ಲಿ ರೈತರು ಹೆಚ್ಚಿನ ಹಾಲು ಉತ್ಪಾದಿಸುವ ಗುರಿಯನ್ನು ಹೊಂದಬೇಕು. ಕಬ್ಬಿನ ಬೆಳೆಗಳ ಆದಾಯ ಜೊತೆ ಹೈನುಗಾರಿಕೆ ಒಳ್ಳೆಯ ಆದಾಯವಿದೆ ಎಂದು ಹೇಳಿದರು.

Spread the love

About Laxminews 24x7

Check Also

ಬೆಳಗಾವಿ-ಖಾನಾಪುರದಲ್ಲಿ ಅಕ್ರಮ ಗಣಿಗಾರಿಕೆ ದಂಧೆ: ಜಿಲ್ಲಾಧಿಕಾರಿಗೆ ರಾಜಕುಮಾರ ಟೋಪಣ್ಣವರ, ಸುಜೀತ್ ಮುಳಗುಂದ ದೂರು

Spread the loveಖಾನಾಪುರ, ಬೆಳಗಾವಿ ಭಾಗದಲ್ಲಿ ಅಕ್ರಮ ಗಣಿಗಾರಿಕೆ ತಡೆಯುವಂತೆ ಆಗ್ರಹಿಸಿ ಮಂಗಳವಾರ ರಾಜಕುಮಾರ ಟೋಪಣ್ಣವರ ಹಾಗೂ ಸುಜೀತ್ ಮುಳಗುಂದ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ