Breaking News

ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

Spread the love

ತುಮಕೂರಿನ ಸುಕ್ಷೇತ್ರ ಶ್ರೀ ಸಿದ್ದಗಂಗಾ ಮಠದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ  ದ್ರೌಪದಿ ಮುರ್ಮು ಅವರ‌ ಘನ ಉಪಸ್ಥಿತಿ ಹಾಗೂ ಪರಮಪೂಜ್ಯ  ಡಾ. ಸಿದ್ದಲಿಂಗ ಮಹಾಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಜರುಗಿದ ಡಾ. ಶಿವಕುಮಾರ ಮಹಾಸ್ವಾಮೀಜಿಗಳವರ 119ನೇ ಜನ್ಮದಿನಾಚರಣೆ ಹಾಗೂ ಗುರುವಂದನಾ ಸಮಾರಂಭದಲ್ಲಿ ಪಾಲ್ಗೊಳ್ಳಲಾಯಿತು.

ಈ ಸಂದರ್ಭದಲ್ಲಿ, ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್‌ ಚಂದ್‌ ಗೆಹ್ಲೋಟ್‌ ಅವರು, ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್‌ ಜೋಶಿಯವರು, ರಾಜ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು, ರಾಜ್ಯದ ಬೃಹತ್‌ ಕೈಗಾರಿಕಾ ಸಚಿವರಾದ ಶ್ರೀ ಎಂ.ಬಿ ಪಾಟೀಲ್‌ ಅವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು, ಮುಖಂಡರು, ಕಾರ್ಯಕರ್ತರು ಹಾಗೂ ಅಸಂಖ್ಯಾತ ಭಕ್ತಾಧಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕಣ್ಣಿಗೆ ಲೆನ್ಸ್ ಹಾಕಲು 6 ಸಾವಿರ ಲಂಚ ಕೇಳಿದ ವೈದ್ಯೆ – ಲೋಕಾ ಬಲೆಗೆ ಬಿದ್ದ ತುಮಕೂರು ಜಿಲ್ಲಾಸ್ಪತ್ರೆ ನೇತ್ರ ತಜ್ಞೆ..!!!

Spread the loveತುಮಕೂರು ಜಿಲ್ಲಾಸ್ಪತ್ರೆಯಲ್ಲಿ ನೇತ್ರಾ ಚಿಕಿತ್ಸಕಿಯಾಗಿರುವ ಡಾ. ಸವಿತಾ 6 ಸಾವಿರ ಹಣ ಲಂಚ ಪಡೆಯುವಾಗ ರೇಡ್ ಹ್ಯಾಂಡ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ