Breaking News

ಯೋಗೇಶ್ ಗೌಡ ಹತ್ಯೆ ಕೇಸ್ – ಏ.9ಕ್ಕೆ ತೀರ್ಪು ಕಾಯ್ದಿರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ

Spread the love

ಧಾರವಾಡ: ಜಿಲ್ಲಾ ಪಂಚಾಯಿತಿ ಮಾಜಿ ಜಿಲ್ಲಾ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏ.9ಕ್ಕೆ ಕಾಯ್ದಿರಿಸಿದೆ.

ಕಳೆದ 6 ತಿಂಗಳಿಂದ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಾಲಯ ಸಂಪೂರ್ಣ ವಾದ-ಪ್ರತಿವಾದ ಆಲಿಸಿತ್ತು. ಜೊತೆಗೆ ಮಾರ್ಚ್ ಕೊನೆಯ ವಾರದಲ್ಲಿ ಪ್ರಾಸಿಕ್ಯೂಷನ್ ಮತ್ತು ಆರೋಪಿಗಳ ಪರ ವಕೀಲರಿಗೆ ಹೆಚ್ಚುವರಿ ಲಿಖಿತ ವಾದ ಸಲ್ಲಿಕೆ ಮಾಡಲು ಅವಕಾಶ ನೀಡಿತ್ತು. ಇಂದು (ಏ.2) ಎಲ್ಲರೂ ಲಿಖಿತ ವಾದ ಸಲ್ಲಿಸಿದ ಬಳಿಕ ಏ.9ಕ್ಕೆ ತೀರ್ಪು ಪ್ರಕಟ ಮಾಡುವುದಾಗಿ ಹೇಳಿದೆ.

ತೀರ್ಪು ಪ್ರಕಟಣೆ ದಿನ ಎಲ್ಲಾ 21 ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಬೇಕಿದೆ.
ರಾಜಕೀಯ ವೈಷಮ್ಯದಿಂದ ಧಾರವಾಡದಲ್ಲಿ 2016ರ ಜೂ.16ರಂದು ಯೋಗೇಶ್ ಗೌಡ ಹತ್ಯೆ ಮಾಡಲಾಗಿತ್ತು. ಶಾಸಕ ವಿನಯ್ ಕುಲಕರ್ಣಿ ಮೇಲೆ ಅಪರಾಧಿಕ ಒಳಸಂಚು ಮಾಡಿದ ಆರೋಪವಿದೆ. 2019ರಲ್ಲಿ ರಾಜ್ಯ ಸರ್ಕಾರವು ಈ ಪ್ರಕರಣವನ್ನು ಸಿಬಿಐಗೆ ವರ್ಗಾವಣೆ ಮಾಡಿತ್ತು. ಈ ಬಗ್ಗೆ ತನಿಖೆ ಕೈಗೊಂಡ ಸಿಬಿಐ 2020ರಲ್ಲಿ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿತ್ತು.

2021ರಲ್ಲಿ ಶಾಸಕ ವಿನಯ್ ಕುಲಕರ್ಣಿ ಸುಪ್ರೀಂಕೋರ್ಟ್‌ನಿಂದ ಜಾಮೀನು ಪಡೆದಿದ್ದರು. ನಂತರ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಕಳೆದ ವರ್ಷ ಜೂನ್‌ನಲ್ಲಿ ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿತ್ತು. ಹೀಗಾಗಿ ಕಳೆದ 6 ತಿಂಗಳಿನಿಂದ ಜೈಲ್ಲಿನಲ್ಲಿದ್ದರು. ಬಳಿಕ ಫೆ.27ರಂದು ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು.


Spread the love

About Laxminews 24x7

Check Also

ಧಾರವಾಡದಲ್ಲಿ ಹೋರಾಟಕ್ಕೆ ಮುಂದಾಗಿದ್ದ ಉದ್ಯೋಗಾಕಾಂಕ್ಷಿಗಳು ಪೊಲೀಸರ ವಶಕ್ಕೆ

Spread the loveಧಾರವಾಡ: ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಅಂಬೇಡ್ಕರ್‌ ಜಯಂತಿ ದಿನವಾದ ಇಂದು ಧಾರವಾಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ