ನಿಪ್ಪಾಣಿ ತಾಲೂಕಿನ ಬೇನಾಡಿ ಗ್ರಾಮದ ಅವ್ಯವಸ್ಥೆ ಹಾಗೂ ಕಾಳಮ್ಮಾವಾಡಿ ಕಾಲುವೆಯ ಸೇತುವೆ ನಿರ್ಮಾಣದಲ್ಲಿ ಆಗುತ್ತಿರುವ ವಿಳಂಬ ಖಂಡಿಸಿ ಇಂದು ಜಿಲ್ಲಾಧಿಕಾರಿಗಳಿಗೆ ರಾಜ್ಯ ಸಂಘದವ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು. ಅಧಿಕಾರಿಗಳು ಎಚ್ಚೆತ್ತುಕೊಳ್ಳದಿದ್ದರೆ ಕಚೇರಿಗಳಿಗೆ ಬೀಗ ಹಾಕುವುದಾಗಿ ರೈತ ನಾಯಕರು ಗುಡುಗಿದ್ದಾರೆ.
ಇಂದು ಬೆಳಗಾವಿಗೆ ಆಗಮಿಸಿದ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಈ ಕುರಿತಾದ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು. ಇದಕ್ಕೆ ಜಿಲ್ಲಾಧಿಕಾರಿಗಳು ಸಕಾರಾತ್ಮಕ ಪ್ರತಿಕ್ರಿಯೆಯನ್ನು ನೀಡಿದರು.
ನಿಪ್ಪಾಣಿ ತಾಲೂಕಿನ ಬೇನಾಡಿ ಗ್ರಾಮದಲ್ಲಿ ಚರಂಡಿ, ರಸ್ತೆ ಯಾವುದೇ ಮೂಲಭೂತ ವ್ಯವಸ್ಥೆಯಿಲ್ಲ. ಗ್ರಾಮದಲ್ಲಿರುವ ಕಾಲುವೆಯನ್ನು ಕೇಲವರು ಮಧ್ಯದಲ್ಲೇ ಬಂದ್ ಮಾಡಿದ್ದು, ನೀರು ಗ್ರಾಮದಲ್ಲಿ ತುಂಬುತ್ತಿದೆ. ಸುಮಾರು ವರ್ಷಗಳ ಹೋರಾಟದ ಬಳಿಕ ಅಧಿಕಾರಿಗಳು ಸಮಸ್ಯೆ ನಿವಾರಿಸುವ ಭರವಸೆ ನೀಡಿದ್ದಾರೆ. ಆದರೇ ವರ್ಷ ಕಳೆದರೂ ಯಾವುದೇ ಕಾಮಗಾರಿಯನ್ನು ಕೈಗೆತ್ತಿಕೊಂಡಿಲ್ಲ. ಅಪ್ಪಾಚಿವಾಡಿ ಹತ್ತಿರ ಮಹಾರಾಷ್ಟ್ರದ ಕಾಳಮ್ಮಾವಾಡಿ ಕಾಲುವೆಯಿಂದ ನೀರು ಬಂದಿದೆ. ಅಲ್ಲಿ 20 ವರ್ಷಗಳೂ ಕಳೆದರೂ ಸೇತುವೆ ನಿರ್ಮಾಣವಾಗುತ್ತಿಲ್ಲ. ಈ ಕೆಲಸವನ್ನು ಕೂಡಲೇ ಆರಂಭಿಸಬೇಕೆಂದು ಬೆಳಗಾವಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಒಂದು ವೇಳೆ ಕಾಮಗಾರಿಯನ್ನು ಆರಂಭಿಸಿದ್ದರೇ, ನಿಪ್ಪಾಣಿ ನೀರಾವರಿ ಇಲಾಖೆಗೆ ಮುತ್ತಿಗೆ ಹಾಕುವುದಾಗಿ ರೈತ ಸಂಘದ ರಾಜ್ಯ ಕಾರ್ಯದರ್ಶಿ ರಾಜು ಪವಾರ ಎಚ್ಚರಿಕೆಯನ್ನು ನೀಡಿದ್ದಾರೆ.
ಬೇನಾಡಿ ಗ್ರಾಮದಲ್ಲಿ ಮಾದಿಗ ಸಮಾಜದವರ ಮೇಲೆ ಅನ್ಯಾಯವಾಗುತ್ತಿದೆ. ಚರಂಡಿಯ ನೀರನ್ನು ಮಾದಿಗ ವಸತಿಗೆ ಹರಿ ಬಿಡಲಾಗಿದೆ. ಇದರಿಂದಾಗಿ ಗ್ರಾಮದಲ್ಲಿ ಅಡ್ಡಾಡಲೂ ಕೂಡ ತೀವ್ರ ತೊಂದರೆಯಾಗುತ್ತಿದೆ. ಅಲ್ಲಿರುವ ಜನರಿಗೆ ಸಾಂಕ್ರಾಮಿಕ ರೋಗದ ಭೀತಿ ಎದುರಾಗುತ್ತಿದೆ. ಆದರೇ, ಅಲ್ಲಿನ ಪಿಡಿಓ ಮತ್ತು ತಾಲೂಕಾಡಳಿತ ಯಾವುದೇ ಕ್ರಮಕೈಗೊಳ್ಳದೇ, ಕೇವಲ ಆಶ್ವಾಸನೆಗಳನ್ನು ನೀಡುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಕೂಡಲೇ ಸಮಸ್ಯೆ ನಿವಾರಣೆಗೆ ಆದೇಶಿಸಿದ್ದು, ಇದನ್ನು ಪಾಲಿಸದಿದ್ದರೇ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಸರ್ಕಾರಕ್ಕೆ ತಕ್ಕ ಉತ್ತರ ನೀಡುವುದಾಗಿ ರೈತ ಸಂಘದ ರಾಜ್ಯ ಕಾರ್ಯದರ್ಶಿ ಕಿಶನ್ ನಂದಿ ಹೇಳಿದರು.
ಈ ಸಂದರ್ಭದಲ್ಲಿ ನಿಪ್ಪಾಣಿ ತಾಲೂಕಿನ ಬೇನಾಡಿ ಮತ್ತು ಅಪ್ಪಾಚಿವಾಡಿಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.
Laxmi News 24×7