Breaking News

ಬೆಳಗಾವಿ ಪೊಲೀಸರ ಖೆಡ್ಡಾಕ್ಕೆ ಬಿದ್ದ ಮಟಕಾ ಬುಕ್ಕಿ ಹಾಗೂ ಗಾಂಜಾ ವ್ಯಸನಿ

Spread the love

ಬೆಳಗಾವಿ ನಗರದ ಎಪಿಎಂಸಿ ಮತ್ತು ಖಡೇಬಜಾರ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮಟಕಾ ದಂಧೆಯಲ್ಲಿ ತೊಡಗಿದ್ದ ಶುಭಂ ರೆಡ್ಡಿ ಮತ್ತು ಗಾಂಜಾ ಸೇವಿಸಿ ರಂಪಾಟ ಮಾಡುತ್ತಿದ್ದ ಸಾಯಿ ವಿನಾಯಕ ಪ್ರಧಾನ್‌ನನ್ನು ಅಧಿಕಾರಿಗಳು ಜೈಲಿಗಟ್ಟಿದ್ದಾರೆ.
ಬೆಳಗಾವಿಯ ಮಾರ್ಕಂಡೇಯ ನಗರದಲ್ಲಿ ಸಾರ್ವಜನಿಕರಿಂದ ಹಣ ಪಡೆದು ಕಲ್ಯಾಣ ಮಟಕಾ ಆಟ ಆಡಿಸುತ್ತಿದ್ದ ಶುಭಂ ವೆಂಕಟೇಶ ರೆಡ್ಡಿ ಎಂಬಾತನನ್ನು ಎಪಿಎಂಸಿ ಠಾಣೆಯ ಪಿಎಸ್‌ಐ ಎಸ್.ಆರ್. ಮುತ್ತತ್ತಿ ಮತ್ತು ತಂಡ ದಾಳಿ ಮಾಡಿ ಬಂಧಿಸಿದೆ. ವಿಚಾರಣೆ ವೇಳೆ ಆರೋಪಿ ಕಿಶನ ಸುರೇಶ ಭಜಂತ್ರಿ ಎಂಬಾತನಿಗೆ ಹಣ ನೀಡುತ್ತಿರುವುದಾಗಿ ತಿಳಿಸಿದ್ದು, ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಇನ್ನೊಂದೆಡೆ, ಖಡೇಬಜಾರ ಠಾಣೆಯ ಪಿಎಸ್‌ಐ ಆನಂದ ಆದಗೊಂಡ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಮಾದಕ ಪದಾರ್ಥ ಸೇವಿಸಿ ಅಸಹಜವಾಗಿ ವರ್ತಿಸುತ್ತಿದ್ದ ಸಾಯಿ ವಿನಾಯಕ ಪ್ರಧಾನ ಎಂಬಾತನನ್ನು ಬಂಧಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ಯಶಸ್ವಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳನ್ನು ಪೊಲೀಸ್ ಆಯುಕ್ತರು ಹಾಗೂ ಡಿಸಿಪಿಯವರು ಶ್ಲಾಘಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ