Breaking News

ಶಾಸಕ ರಮೇಶ ಜಾರಕಿಹೊಳಿ ಅವರಿಂದ ದೈವಿ ವನ ನಿರ್ಮಾಣ ಕಾಮಗಾರಿಗೆ ಚಾಲನೆ

Spread the love

ಗೋಕಾಕ: ನಗರದ ಜನತೆ ಮತ್ತು ಭಕ್ತರಿಗಾಗಿ ಶ್ರೀ ಚೌಡೇಶ್ವರಿ ದೈವಿ ವನ ನಿರ್ಮಾಣ ಮಾಡಲಾಗುತ್ತಿದೆ. ಗೋಕಾಕ ಮಾದರಿ ಕ್ಷೇತ್ರವನ್ನಾಗಿ ಮಾಡಲು ಶ್ರಮಿಸುತ್ತಿರುವದಾಗಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು.
ಅವರು, ನಗರದ ಕಡಬಗಟ್ಟಿ ರಸ್ತೆಯಲ್ಲಿರುವ ಶ್ರೀ ಚೌಡೇಶ್ವರಿ ದೇವಸ್ಥಾನದ ಪಕ್ಕದಲ್ಲಿ ಸುಮಾರು ೧ಕೋಟಿ ರೂಗಳ ವೆಚ್ಚದಲ್ಲಿ ಅರಣ್ಯ ಇಲಾಖೆಯಿಂದ ಶುಕ್ರವಾರದಂದು ಚೌಡೇಶ್ವರಿ ದೈವಿ ವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಗೋಕಾಕ ನಗರ ಹಾಗೂ ತಾಲೂಕಿನ ಅಭಿವೃದ್ಧಿಗಾಗಿ ಅನೇಕ ಜನಪರ ಕಾರ್ಯಗಳನ್ನು ಮಾಡಲಾಗುತ್ತಿದ್ದು ಜನತೆ ಸಹಕರಿಸುವಂತೆ ಮನವಿ ಮಾಡಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರ ಪ್ರೀಯದರ್ಶಿ, ಸಹಾಯಕ ಅರಣ್ಯ ಸಂಸರಕ್ಷಣಾಧಿಕಾರಿ ವಾಸೀಂರಾಜ ತೆನಗಿ, ಗೋಕಾಕ ವಲಯ ಅರಣ್ಯಾಧಿಕಾರಿ ಆನಂದ ಹೆಗಡೆ, ಸಿಬ್ಬಂಧಿಗಳಾದ ಹನಮಂತ ಇಂಗಳಗಿ, ಮಲ್ಲಪ್ಪ ತೇಲಿ, ಹನಮಂತ ಹಮ್ಮನವರ ಸೇರಿದಂತೆ ಅನೇಕರು ಇದ್ದರು.


Spread the love

About Laxminews 24x7

Check Also

ಸಾವಳಗಿಯಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಅದ್ದೂರಿ – ಅಡ್ಡ ಪಲ್ಲಕ್ಕಿ ಉತ್ಸವಕ್ಕೆ ಭಕ್ತರ ಅಪಾರ ಸ್ಪಂದನೆ

Spread the loveಗೋಕಾಕ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಅಡ್ಡ ಪಲ್ಲಕ್ಕಿ ಉತ್ಸವದಲ್ಲಿ ಶೂನ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ