Breaking News

ದಾವಣಗೆರೆ ದಕ್ಷಿಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಮರ್ಥ್ ಶಾಮನೂರು ಬೆಂಬಲಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Spread the love

ಕ್ಯಾಂಪ್ ಆಫೀಸ್‌ನಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಸಚಿವರು

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರನ್ನು ಬೆಂಬಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದರು.

ದಾವಣಗೆರೆಯ ಬಾಪೂಜಿ ಎಂಬಿಎ ಕಾಲೇಜಿನಲ್ಲಿರುವ ಪಕ್ಷದ ಕ್ಯಾಂಪ್ ಆಫೀಸ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಅಲೆ ಬೀಸುತ್ತಿದ್ದು, ಗೆಲುವು ಗ್ಯಾರಂಟಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಾಮನೂರು ಶಿವಶಂಕರಪ್ಪನವರಿಗೆ ಕ್ಷೇತ್ರದ ಜನ ಐದು ವರ್ಷಗಳ ಕಾಲ ಆಡಳಿತ ನಡೆಸಲು ಅಧಿಕಾರ ನೀಡಿದ್ದರು. ಆದರೆ, ಹಿರಿಯ ನಾಯಕನ ನಿಧನದಿಂದಾಗಿ ತೆರವಾದ ಸ್ಥಾನಕ್ಕೆ ಚುನಾವಣೆ ಬಂದಿದ್ದು, ಉಳಿದ ಎರಡು ವರ್ಷಕ್ಕೆ ಶಾಮನೂರು ಕುಟುಂಬಸ್ಥರಿಗೆ ಟಿಕೆಟ್ ನೀಡಲಾಗಿದೆ. 27 ವರ್ಷದ ಯುವಕ ಸಮರ್ಥ್ ಶಾಮನೂರು ತುಂಬಾ ತಿಳುವಳಿಕೆ ಹೊಂದಿದ್ದು, ಕ್ಷೇತ್ರದ ಬಗ್ಗೆ ಕಾಳಜಿ‌ ಹೊಂದಿದ್ದಾರೆ, ತಾತನ ಹಾದಿಯಲ್ಲಿ ಸಮರ್ಥ್ ಮುನ್ನಡೆಯುವರು ಎಂದರು.

ಟಿಕೆಟ್ ಹಂಚಿಕೆ ವಿಷಯದಲ್ಲಿ ಸುಖಾಸುಮ್ಮನೆ ಗೊಂದಲ ಸೃಷ್ಟಿಸಲಾಗಿತ್ತು. ಆದರೆ,‌‌ ಗೊಂದಲವಿಲ್ಲ, ನಾವು ಕ್ಷೇತ್ರದಲ್ಲಿ ಪ್ರಚಾರ ಮಾಡುವಾಗ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಮರ್ಥ್ ಗೆಲುವು ಶತಸಿದ್ಧ. ಬಿಜೆಪಿ ಅಭ್ಯರ್ಥಿಗೆ ಮತಹಾಕಿದರೂ ಪ್ರಯೋಜನವಿಲ್ಲ. ಹೀಗಾಗಿ ಮತದಾರರು ಸಮರ್ಥ್ ಕೈಹಿಡಿಯಲಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌

ಬಾಬು ಜಗಜೀವನ್ ರಾಮ್ ಭಾವಚಿತ್ರಕ್ಕೆ‌ ಪುಷ್ಪಾರ್ಚನೆ

ಭಾರತದ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮದಿನದ ಪ್ರಯುಕ್ತ ಅವರ ಭಾವಚಿತ್ರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಪುಷ್ಪಾರ್ಚನೆ ಮಾಡಿದರು.

ರೋಡ್ ಶೋ‌ ನಡೆಸಿದ ಸಚಿವರು
ಇದಕ್ಕೂ ಮುನ್ನ ಸಚಿವರು ವಾರ್ಡ್ 11,‌‌ ಬಸವರಾಜ್ ಪೇಟೆ ವ್ಯಾಪ್ತಿಯ ನರಸರಾಜ ಪೇಟೆ ಪ್ರದೇಶದಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ‌ ಪ್ರಚಾರ ನಡೆಸಿದರು. ‌

ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯರಾದ ನಾಸೀರ್‌ ಹುಸೇನ್, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಬಲ್ಕಿಸ್ ಭಾನು, ರಮೇಶ್ ಬಾಬು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮೇರುಜ್ ಖಾನ್, ಜಿಲ್ಲಾ ವಕ್ತಾರ ಬಸವರಾಜ್, ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ